ETV Bharat / state

ಹಾಸನ ಜಿಲ್ಲೆಯಲ್ಲಿ ಇಂದು 275 ಕೋವಿಡ್‌ ಪ್ರಕರಣ ಪತ್ತೆ: ಸೋಂಕಿತರ ಸಂಖ್ಯೆ 13,483 ಕ್ಕೇರಿಕೆ... - hassan

ಹಾಸನ ಜಿಲ್ಲೆಯಲ್ಲಿ ಇಂದು ಹೊಸದಾಗಿ 275 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13,483 ಕ್ಕೆ ಏರಿಕೆಯಾಗಿದೆ.

hassan
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Sep 20, 2020, 7:18 PM IST

ಹಾಸನ: ಜಿಲ್ಲೆಯಲ್ಲಿ ಇಂದು ಹೊಸದಾಗಿ 275 ಕೋವಿಡ್‌ ಪ್ರಕರಣಗಳು ವರದಿಯಾಗಿದ್ದು, ಸೋಂಕಿತರ ಸಂಖ್ಯೆ 13,483 ಕ್ಕೆ ಏರಿಕೆಯಾಗಿದೆ. 6 ಸಾವಿನೊಂದಿಗೆ ಮೃತರ ಸಂಖ್ಯೆ 266 ತಲುಪಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಸತೀಶ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಇಂದು ಬಿಡುಗಡೆಯಾದ 213 ಜನರು ಸೇರಿ ಈವರೆಗೆ 10,527 ಮಂದಿ ಗುಣಮುಖರಾಗಿದ್ದಾರೆ. 2,691 ಸಕ್ರಿಯ ಪ್ರಕರಣಗಳಿದ್ದು, ಜಿಲ್ಲಾ ಕೋವಿಡ್‌ ಆಸ್ಪತ್ರೆ, ಕೋವಿಡ್‌ ಆರೈಕೆ ಕೇಂದ್ರಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತೀವ್ರ ನಿಗಾ ಘಟಕದಲ್ಲಿ 52 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.

ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಇಂದು ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-21, ಅರಕಲಗೂಡು-32, ಅರಸೀಕೆರೆ-31, ಬೇಲೂರು-7, ಚನ್ನರಾಯಪಟ್ಟಣ-67, ಹಾಸನ-102, ಹೊಳೆನರಸೀಪುರ-8, ಸಕಲೇಶಪುರ-7, ಇತರೆ- 0 ಒಟ್ಟು 275 ಪಾಸಿಟಿವ್ ಪ್ರಕರಣ ದಾಖಲಾಗಿದೆ.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲಾರು ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲ್ಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 471
2. ಅರಕಲಗೂಡು- 1,266
3. ಅರಸೀಕೆರೆ - 1,726
4. ಬೇಲೂರು - 976
5. ಚನ್ನರಾಯಪಟ್ಟಣ - 1,757
7. ಹಾಸನ- 5,738
8. ಹೊಳೆನರಸೀಪುರ- 1,002
9. ಸಕಲೇಶಪುರ - 467

ಇತರ 80 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 13,483 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.