ETV Bharat / state

ಮನೆ ಬಾಗಿಲು ಮುರಿದು ಕಳ್ಳತನ: 390 ಗ್ರಾಂ ಚಿನ್ನ, 2 ಕೆಜಿ ಬೆಳ್ಳಿ ದೋಚಿ ಪರಾರಿ - hassan crime news

ಹಾಸನ ಜಿಲ್ಲೆಯಲ್ಲಿ ಹೇಮಾವತಿ ನಗರದಲ್ಲಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಕಳ್ಳರು ಹಿಂಬಾಗಿಲು ಮುರಿದು ಒಳ ನುಗ್ಗಿ 11.5 ಲಕ್ಷ ಮೌಲ್ಯದ 390 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 2 ಕೆಜಿ ಬೆಳ್ಳಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ.

hassan
ಮನೆ ಬಾಗಿಲು ಮುರಿದು ಕಳ್ಳತನ
author img

By

Published : Nov 24, 2020, 1:37 PM IST

ಹಾಸನ: ತಡರಾತ್ರಿ ಮನೆ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ಜಿಲ್ಲೆಯ ಹೇಮಾವತಿ ನಗರದಲ್ಲಿ ನಡೆದಿದೆ.

ಹೇಮಾವತಿ ನಗರದಲ್ಲಿ ಸುಜಾತ - ಕೃಷ್ಣಮೂರ್ತಿ ಎಂಬುವವರಿಗೆ ಸೇರಿದ ಮನೆಯಲ್ಲಿ ಯಾರೂ ಇಲ್ಲದ ವೇಳೆ ಹಿಂಬಾಗಿಲು ಮುರಿದು ಒಳ ನುಗ್ಗಿರುವ ಕಳ್ಳರು,11.5 ಲಕ್ಷ ಮೌಲ್ಯದ 390 ಗ್ರಾಂ ಚಿನ್ನ, 1 ಲಕ್ಷ ಮೌಲ್ಯದ 2 ಕೆಜಿ ಬೆಳ್ಳಿ ದೋಚಿ ಕಳ್ಳರು ಪರಾರಿಯಾಗಿದ್ದಾರೆ.

ಕಳ್ಳತನವಾದ ಮನೆಯ ಸ್ಥಳಕ್ಕೆ ಬೆರಳಚ್ಚು ತಜ್ಞರು ಮತ್ತು ಶ್ವಾನದಳ ಭೇಟಿ ಪರಿಶೀಲನೆ ನಡೆಸಿದ್ದು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಆರ್.ಶ್ರೀನಿವಾಸ್ ಗೌಡ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಪೆನ್​ಷನ್ ಮೊಹಲ್ಲಾ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.