ಹಾಸನ: ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡರ 54ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಬಡವರಿಗೆ ದಿನಸಿ ಕಿಟ್ ವಿತರಿಸಲಾಯಿತು.
ನಗರದ ತೇಜೂರು ಕ್ರಾಸ್ ಹಾಗೂ ರಿಂಗ್ ರಸ್ತೆ ಬಳಿ ಗುಡಿಸಲು ಹಾಕಿಕೊಂಡು ವಾಸ ಮಾಡುತ್ತಿರುವ ಕುಟುಂಬಗಳಿಗೆ ದಿನನಿತ್ಯ ಉಪಯೋಗಿಸುವ ಆಹಾರ ಪದಾರ್ಥಗಳನ್ನ ವಿತರಿಸಲಾಯಿತು. ಬಳಿಕ ಮಾತನಾಡಿದ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಸಿ.ಡಿ.ಮನುಕುಮಾರ್, ಟಿ.ಎ.ನಾರಾಯಣಗೌಡರ 54ನೇ ವರ್ಷದ ಹುಟ್ಟುಹಬ್ಬದ ಅಂಗವಾಗಿ ಪ್ರತಿ ವರ್ಷವೂ ಸಹ ಒಂದಲ್ಲ ಒಂದು ರೀತಿಯಲ್ಲಿ ಸಮಾಜ ಸೇವೆ ಮಾಡಿಕೊಂಡು ಬರಲಾಗುತ್ತಿದೆ. ಕಳೆದ ಮೂರು ತಿಂಗಳಿನಿಂದ ಕೊರೊನಾ ಆವರಿಸಿ ಜನರು ಸಂಕಷ್ಟದಲ್ಲಿದ್ದಾರೆ.
ಈ ಸಂದರ್ಭದಲ್ಲಿ ಬಡ ಕುಟುಂಬಗಳಿಗೆ ದಿನಸಿ ಕಿಟ್ ನೀಡುವುದರ ಮೂಲಕ ಜನ್ಮದಿನ ಆಚರಿಸಬೇಕು ಎಂಬ ರಾಜ್ಯಾಧ್ಯಕ್ಷರ ಇಚ್ಛೆಯಂತೆ ಹಾಸನದಲ್ಲಿರುವ ಬಡ ಕುಟುಂಬಗಳನ್ನ ಹುಡುಕಿ ಕಿಟ್ ವಿತರಿಸಲಾಗಿದೆ ಎಂದರು.