ETV Bharat / state

ಹಾಸನ ಜಿಲ್ಲೆಯಲ್ಲಿ 2 ಸಾವಿರದ ಗಡಿ ದಾಟಿದ ಕೊರೊನಾ: 97 ಪಾಸಿಟಿವ್ ಕೇಸ್​​ ಪತ್ತೆ...

ಹಾಸನ ಜಿಲ್ಲೆಯಲ್ಲಿ ಕೊರೊನಾ 2 ಸಾವಿರದ ಗಡಿದಾಟಿದ್ದು, ಇಂದು 97 ಪಾಸಿಟಿವ್ ಪತ್ತೆಯಾಗಿದ್ದು, 6 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

Corona News Hassan
ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್
author img

By

Published : Jul 30, 2020, 6:50 PM IST

ಹಾಸನ: ದೇಶವನ್ನೇ ಬೆಚ್ಚಿ ಬೀಳಿಸಿರುವ ಕೊರೊನಾ ಜಿಲ್ಲೆಯಲ್ಲಿ 2 ಸಾವಿರದ ಗಡಿದಾಟಿದ್ದು, ಇಂದು 97 ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು, 6 ಜನ ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ಮಾಧ್ಯಮಕ್ಕೆ ಮಾಹಿತಿ ನೀಡಿರುವ ಅವರು, ಗುರುವಾರ ದಾಖಲಾಗಿರುವ ಕೊರೊನಾ ಪ್ರಕರಣದಲ್ಲಿ ಆಲೂರು-1, ಬೇಲೂರು-11, ಹಾಸನ-32, ಅರಸೀಕೆರೆ-14, ಚನ್ನರಾಯಪಟ್ಟಣ-17, ಅರಕಲಗೂಡು-7, ಹೊಳೆನರಸೀಪುರ-14 ಒಟ್ಟು 97 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಇದುವರೆಗೂ ಜಿಲ್ಲೆಯಲ್ಲಿ ಒಟ್ಟು 2,030ಕ್ಕೆ ಸೋಂಕಿತರ ಸಂಖ್ಯೆ ಏರಿಕೆಯಾಗಿದೆ.

ಹಾಸನ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್

ಇಂದು 16 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಒಟ್ಟು ಇದುವರೆಗೆ 901 ಮಂದಿ ಬಿಡುಗಡೆಯಾಗಿದ್ದಾರೆ. 1069 ಸಕ್ರಿಯ ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 60 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ. ಐಸಿಯುನಲ್ಲಿ 23 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.

ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆಯಲ್ಲಿ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತಾ, ನೆಗಡಿ, ಕೆಮ್ಮು ಏನಾದರೂ ಇದ್ದರೆ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಮನವಿ ಮಾಡಿದರು.

ಜಿಲ್ಲೆಯ ತಾಲ್ಲೂಕುವಾರು ಕೋವಿಡ್ ಪ್ರಕರಣಗಳು:
1. ಆಲೂರು - 86
2. ಅರಕಲಗೂಡು- 144
3. ಅರಸೀಕೆರೆ- 373
4. ಬೆಲೂರು- 112
5. ಚನ್ನರಾಯಪಟ್ಟಣ- 384
6. ಹಾಸನ- 642
7. ಹೊಳೆನರಸೀಪುರ- 200
8. ಸಕಲೇಶಪುರ- 76

ಇನ್ನು ಇತರ 13 ಪ್ರಕರಣಗಳು ಈವರೆಗೆ ವರದಿಯಾಗಿದ್ದು, ಒಟ್ಟು 2030 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.