ಹಾಸನ: ಚಾಲಕನ ನಿಯಂತ್ರಣ ತಪ್ಪಿ ಕಾರು ಕೆರೆಗೆ ಬಿದ್ದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬಸ್ಸುಬಿ (55) ಸಾವಿಗೀಡಾದ ಮಹಿಳೆಯಾಗಿದ್ದು, ಅವರ ಕುಟುಂಬ ಇಬ್ಬರು ಗಾಯಗೊಂಡಿದ್ದಾರೆ. ಹರಿ ಹಳ್ಳಿಯಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಜರೀನಾ ಹಾಗೂ ಅವರ ಮಗ ಇಂತಿಯಾಜ್ ಪವಾಡ ಸದೃಶ ರೀತಿಯಲ್ಲಿ ಸಾವಿನ ದವಡೆಯಿಂದ ಪಾರಾಗಿದ್ದಾರೆ. ಬಸ್ಸುಬಿ ಮೃತದೇಹವನ್ನು ಕೆರೆಯಿಂದ ಹೊರತೆಗೆಯಲು ಕಾರ್ಯಾಚರಣೆ ನಡೆಯುತ್ತಿದೆ.
ಗಂಭೀರವಾಗಿ ಗಾಯಗೊಂಡಿರುವ ಜರೀನಾ ಮತ್ತು ಮಗ ಇಂತಿಯಾಜ್ಅನ್ನು ಬೇಲೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. 2013 ಮೇ 23ರಂದು ಚಾಲಕನ ನಿಯಂತ್ರಣ ತಪ್ಪಿ ಕೆಎಸ್ಆರ್ಟಿಸಿ ಬಸ್ಸೊಂದು ಉರುಳಿಬಿದ್ದ ಪರಿಣಾಮ 9 ಜನ ಸಾವನ್ನಪ್ಪಿದ್ದರು. ಇಂದು ಮತ್ತೊಂದು ಅವಘಡ ನಡೆದಿದ್ದು, ಈ ಕುರಿತು ಬೇಲೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.