ETV Bharat / state

ಹಿಂಬದಿಯಿಂದ ಲಾರಿಗೆ ಕಾರು ಡಿಕ್ಕಿ.. ಹಾಸನದಲ್ಲಿ ಮೂವರು ದುರ್ಮರಣ - a car colliding with a lorry,

ಕೆಂಚಟ್ಟಹಳ್ಳಿ ಬಳಿ ರಸ್ತೆಗೆ ಹಾಕಲಾಗಿದ್ದ ಹಂಪ್ಸ್ ದಾಟಲು ಲಾರಿ ಚಾಲಕ ಏಕಾಏಕಿ ಬ್ರೇಕ್ ಹಿಡಿದ ಹಿನ್ನೆಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ. ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟರೇ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಕಡೆಗೆ ಕರೆದೊಯ್ಯುವ ಮಾರ್ಗಮಧ್ಯೆ ಸಾವನ್ನಪ್ಪಿದ್ದಾರೆ.

http://10.10.50.85//karnataka/19-June-2021/hsn-01-accident-av-hd_19062021210753_1906f_1624117073_1040.jpg

author img

By

Published : Jun 19, 2021, 9:40 PM IST

Updated : Jun 19, 2021, 9:52 PM IST

ಹಾಸನ: ಚಲಿಸುತ್ತಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಮೂವರು ಸಾವಿಗೀಡಾಗಿರುವ ಘಟನೆ ಹಾಸನದ ಹೊರವಲಯದ ಕೆಂಚಟ್ಟಹಳ್ಳಿ ಬಳಿ ನಡೆದಿದೆ. ಮೃತರನ್ನು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ಮೂಲದ ಯೋಗೇಶ್, ಮಂಜೇಶ್ ಹಾಗೂ ಕುಮಾರ್ ಎಂದು ಗುರುತಿಸಲಾಗಿದೆ.

ಕೆಂಚಟ್ಟಹಳ್ಳಿ ಬಳಿ ರಸ್ತೆಗೆ ಹಾಕಲಾಗಿದ್ದ ಹಂಪ್ಸ್ ದಾಟಲು ಲಾರಿ ಚಾಲಕ ಏಕಾಏಕಿ ಬ್ರೇಕ್ ಹಿಡಿದ ಹಿನ್ನೆಲೆ ಹಿಂಬದಿಯಿಂದ ಬರುತ್ತಿದ್ದ ಕಾರು ಲಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗ್ತಿದೆ.

ಹಿಂಬದಿಯಿಂದ ಲಾರಿಗೆ ಡಿಕ್ಕಿ ಹೊಡೆದ ಕಾರು

ಡಿಕ್ಕಿಯ ರಭಸಕ್ಕೆ ಕಾರಿನ ಮುಂಭಾಗ ನುಜ್ಜುಗುಜ್ಜಾಗಿದೆ. ಪರಿಣಾಮ ಕಾರಿನಲ್ಲಿದ್ದ ಇಬ್ಬರು ಮೃತಪಟ್ಟರೇ ಗಂಭೀರವಾಗಿ ಗಾಯಗೊಂಡಿದ್ದ ಕುಮಾರ್ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರು ಕಡೆಗೆ ಕರೆದೊಯ್ಯುವ ಮಾರ್ಗಮಧ್ಯೆ ಮೃತಪಟ್ಟಿದ್ದಾರೆ.

ಕಾರು ಚಾಲಕನ ನಿರ್ಲಕ್ಷ್ಯದಿಂದ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗ್ತಿದೆ. ಸ್ಥಳಕ್ಕೆ ಹಾಸನ ಸಂಚಾರಿ ಪೊಲೀಸರು ಭೇಟಿ ನೀಡಿ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಜಯಚಾಮರಾಜೇಂದ್ರ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಲಾರಿ ಚಾಲಕ ಹಾಗೂ ಅಪಘಾತಕ್ಕೆ ಒಳಗಾದ ಕಾರನ್ನು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ಹಾಸನ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Jun 19, 2021, 9:52 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.