ETV Bharat / state

ಕೆಎಸ್ಆರ್​ಟಿಸಿ ಬಸ್​​-ಟೆಂಪೋ ನಡುವೆ ಡಿಕ್ಕಿ: ಮೂವರ ದುರ್ಮರಣ - A collision between KSRTC bus and Tempo in Hassan

ಕೆಎಸ್ಆರ್​ಟಿಸಿ ಬಸ್ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮ ಸ್ಥಳದಲ್ಲೇ ಮೂರು ಮಂದಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಅರಸೀಕೆರೆ-ತಿಪಟೂರು ರಸ್ತೆಯ ಸೂಳೆಕೆರೆ ಗೇಟ್ ಸಮೀಪ ನಡೆದಿದೆ.

A collision between KSRTC bus and Tempo in Hassan
ಕೆಎಸ್ಆರ್​ಟಿಸಿ ಬಸ್ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಡಿಕ್ಕಿ : ಮೂವರ ದುರ್ಮರಣ
author img

By

Published : Jan 30, 2020, 3:06 PM IST

ಹಾಸನ: ಕೆಎಸ್ಆರ್​ಟಿಸಿ ಬಸ್ ಮತ್ತು ಟೆಂಪೋ ಟ್ರ್ಯಾಕ್ಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಹಿನ್ನೆಲೆಯಲ್ಲಿ ಸ್ಥಳದಲ್ಲೇ ಮೂರು ಮಂದಿ ಸಾವನ್ನಪ್ಪಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 206ರ ಅರಸೀಕೆರೆ-ತಿಪಟೂರು ರಸ್ತೆಯ ಸೂಳೆಕೆರೆ ಗೇಟ್ ಸಮೀಪ ನಡೆದಿದೆ.

ಕೆಎಸ್ಆರ್​ಟಿಸಿ ಬಸ್ ಮತ್ತು ಟೆಂಪೋ ನಡುವೆ ಡಿಕ್ಕಿ: ಮೂವರ ದುರ್ಮರಣ
ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಒಂಟೆಕಲ್ಲಟ್ಟಿ ಗ್ರಾಮದ ಬಸವರಾಜ್ (48), ಕಬ್ಬಿನಕೆರೆ ಗ್ರಾಮದ ಯಲ್ಲಯ್ಯ (70) ಹಾಗೂ ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಚಿಕ್ಕಬಿದರೆ ಗ್ರಾಮದ ಟೆಂಪೋ ಟ್ರ್ಯಾಕ್ಸ್ ಚಾಲಕ ರಮೇಶ್ (24) ಮೃತರು ಎಂದು ತಿಳಿದು ಬಂದಿದೆ. ಹತ್ತಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಗಾಯಾಳುಗಳನ್ನು ಅರಸೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಎರಡೂ ವಾಹನಗಳ ಚಾಲಕರ ಅತಿಯಾದ ವೇಗವೇ ಘಟನೆಗೆ ಕಾರಣ ಎಂಬುದು ಪ್ರತ್ಯಕ್ಷದರ್ಶಿಗಳ ಮಾತಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಮೃತದೇಹಗಳನ್ನು ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.