ಹಾಸನ: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ವಿರುದ್ಧ ಅವಹೇಳನಕಾರಿ ಪೋಸ್ಟ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಅಖಿಲ ಭಾರತ ಡಾ. ಅಂಬೇಡ್ಕರ್ ಸೈನ್ಯದ ವತಿಯಿಂದ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು
ಮಧುಗೌಡ ಎಂಬಾತ ತನ್ನ ಫೇಸ್ಬುಕ್ ವಾಲ್ನಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಹುಟ್ಟಿನ ಬಗ್ಗೆ ಅವಹೇಳನಕಾರಿಯಾಗಿ ಪೋಸ್ಟ್ ಮಾಡಿದ್ದಾನೆ. ಈತನ ಬರಹದಿಂದ ಅಂಬೇಡ್ಕರ್ ಅಭಿಮಾನಿಗಳ ಭಾವನೆಗಳಿಗೆ ಧಕ್ಕೆಯುಂಟಾಗಿದ್ದು, ಸಮಾಜದ ಶಾಂತಿ ಕದಡಲು ಮುಂದಾಗಿರುವವನ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಒತ್ತಾಯಿಸಿದರು.
ಇದನ್ನು ದೇಶದ್ರೋಹ ಎಂದು ಪರಿಗಣಿಸಿ ಕೂಡಲೇ ಮಧುಗೌಡನ ವಿರುದ್ದ ಪ್ರಕರಣ ದಾಖಲಿಸಿ, ಬಂಧಿಸಬೇಕೆಂದು ಮನವಿ ಮಾಡಿದರು.