ಹಾಸನ: ಕಳೆದ ನಗರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಬೆಂಬಲ ಸೂಚಿಸಿದ ಹಿನ್ನೆಲೆಯಲ್ಲಿ ಪಾಷ ಹಲ್ಲೆ ನಡೆಸಿದ್ದಾರೆ ಎಂದು ಹಲ್ಲೆಗೆ ಒಳಗಾದ ಅಬ್ದುಲ್ ರೆಹಮಾನ್ ಆರೋಪಿಸಿದ್ದಾರೆ.
ನಿನ್ನೆ ರಾತ್ರಿ 10.30ಕ್ಕೆ ನಗರಸಭೆ ಮಾಜಿ ಸದಸ್ಯ ಏಜಾಸ್ ಹಾಗೂ ಅವರ ಬೆಂಬಲಿಗರು ಮನೆಗೆ ನುಗ್ಗಿ ಹಲ್ಲೆ ಮಾಡಿದ್ದಾರೆ. ಮನೆಯಲ್ಲಿ ಮಹಿಳೆಯರನ್ನು ಎಳೆದಾಡಿ, ಬೀರುವಿನಲ್ಲಿದ್ದ ಇಟ್ಟಿದ್ದ ಚಿನ್ನಾಭರಣವನ್ನೂ ದೋಚಿದ್ದಾರೆ. ಅಲ್ಲದೆ ಪ್ರಾಣ ಬೆದರಿಕೆಯನ್ನು ಹಾಕಿದ್ದಾರೆ ಎಂದು ದೂರಿದರು.