ETV Bharat / state

ಸಾಲಬಾಧೆಯಿಂದ ಬೇಸತ್ತ ವ್ಯಕ್ತಿ ನೇಣಿಗೆ ಶರಣು - ಸಾಲ ಸುದ್ದಿ

ಸಾಲಬಾಧೆಯಿಂದ ಬೇಸತ್ತ ವ್ಯಕ್ತಿಯೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನದ ಹೊಳೆನರಸೀಪುರದಲ್ಲಿ ತಾಲೂಕಿನಲ್ಲಿ ನಡೆದಿದೆ.

ನೇಣಿಗೆ ಶರಣು
ನೇಣಿಗೆ ಶರಣು
author img

By

Published : Sep 25, 2020, 3:49 PM IST

ಹಾಸನ (ಹೊಳೆನರಸೀಪುರ): ಸಾಲಬಾಧೆ ಹಿನ್ನೆಲೆಯಲ್ಲಿ ವ್ಯಕ್ತಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೊಳೆನರಸೀಪುರ ತಾಲೂಕಿನಲ್ಲಿ ನಡೆದಿದೆ.

ತಾಲೂಕಿನ ಸಬ್ಬನಹಳ್ಳಿ ಗ್ರಾಮದ ಜಯಣ್ಣ (55) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಎಲೆಕ್ಟ್ರಿಕಲ್ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದ ಜಯಣ್ಣ ಕೋವಿಡ್ 19 ಸಂದರ್ಭದಲ್ಲಿ ಕೆಲಸವನ್ನು ಸ್ಥಗಿತಗೊಳಿಸಿದ್ದ. ಈ ವೇಳೆ, ಸಾಕಷ್ಟು ಕೈ ಸಾಲ ಮಾಡಿಕೊಂಡಿದ್ದ ಎನ್ನಲಾಗಿದೆ. ಇನ್ನು ಲಾಕ್​ಡೌನ್​ ಮುಗಿದ ಬಳಿಕ ಸಾಲಗಾರರು ಹಣ ಮರುಪಾವತಿ ಮಾಡಬೇಕೆಂದು ಪಟ್ಟು ಹಿಡಿದಿದ್ದಾರೆ. ಆದರೆ ಸಾಲ ತೀರಿಸಲು ಸಾಧ್ಯವಾಗದೇ ಆತ್ಮಹತ್ಯಗೆ ಶರಣಾಗಿದ್ದಾನೆ ಎನ್ನಲಾಗಿದೆ.

ವ್ಯಕ್ತಿ ನೇಣಿಗೆ ಶರಣು

ಇದರಿಂದ ಬೇಸತ್ತ ಜಯಣ್ಣ ಇಂದು ತನ್ನ ಮನೆಯ ದನದ ಕೊಟ್ಟಿಗೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾನೆ. ಇನ್ನು ಸ್ಥಳಕ್ಕೆ ಪೊಲೀಸರು ಆಗಮಿಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದ್ದು, ಈ ಸಂಬಂಧ ಹೊಳೆನರಸಿಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.