ETV Bharat / state

ಹುಟ್ಟುಹಬ್ಬಕ್ಕೆ ಶುಭ ಕೋರಿರುವ ಬ್ಯಾನರ್​​ನಲ್ಲಿ ಸಿದ್ದು ಫೋಟೋ: ಮತ್ತೆ 'ಕೈ' ಹಿಡಿತಾರಾ ಎ.ಮಂಜು?

author img

By

Published : Oct 30, 2019, 9:12 PM IST

ಹಾಸನ ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭ ಕೋರಲಾಗಿದ್ದು, ಎ.ಮಂಜು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವರೇ ಎಂಬ ಅನುಮಾನ ಮೂಡಿಸಿದೆ.

ಸಿದ್ದು ಜೊತೆ ಎ.ಮಂಜು ಫೋಟೊ: ಮತ್ತೆ ಕಾಂಗ್ರೆಸ್ ಪಕ್ಷ ಸೇರುತ್ತಾರ...?

ಹಾಸನ: ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟುಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭ ಕೋರಲಾಗಿದ್ದು, ಎ.ಮಂಜು ಮತ್ತೆ ಕಾಂಗ್ರೆಸ್ ಪಕ್ಷಕ್ಕೆ ಮರಳುವರೇ ಎಂಬ ಅನುಮಾನ ಮೂಡಿಸಿದೆ.

ನವೆಂಬರ್ 1ರಂದು ಎ.ಮಂಜು ಹುಟ್ಟುಹಬ್ಬ. ಹೀಗಾಗಿ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಅಭಿಮಾನಿಗಳು ಕರ್ನಾಟಕ ರಾಜ್ಯೋತ್ಸವ ಹಾಗೂ ಎ.ಮಂಜು ಅವರ ಹುಟ್ಟುಹಬ್ಬಕ್ಕೆ ಶುಭ ಕೋರಿ ಬೃಹತ್ ಬ್ಯಾನರ್ ಹಾಕಿದ್ದಾರೆ. ಈ ಬ್ಯಾನರ್ ಭಾರೀ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‍ನಿಂದ ಹೊರ ಬಂದಿದ್ದ ಎ.ಮಂಜು, ಹಾಸನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಈಗ ಅವರ ಹುಟ್ಟುಹಬ್ಬದ ಬ್ಯಾನರ್​​ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದೆ.

ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿದ್ದ ಎ.ಮಂಜು ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಎ.ಮಂಜು ಬಿಜೆಪಿಯಿಂದ ಹೊರ ಬಂದು ಮತ್ತೆ ಕಾಂಗ್ರೆಸ್ ಮನೆ ಸೇರುತ್ತಾರಾ? ಹಾಸನ ಜಿಲ್ಲೆಯಲ್ಲಿ ಅಸ್ತಿತ್ವ ಸಾಧಿಸಲು ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗುತ್ತಾ ಎಂಬ ಬಗ್ಗೆ ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿದೆ.

Intro:ಸಿದ್ದರಾಮಯ್ಯನವರ ಜೊತೆ ಎ ಮಂಜು ಫೋಟೋ ಮರಳುವರೇ ಕಾಂಗ್ರೆಸ್ಸಿಗೆ ಮತ್ತೆ ಮಾಜಿ ಸಚಿವ. . . ?

ಹಾಸನ: ಹಾಸನ ಲೋಕಸಭಾ ಚುನಾವಣೆಯ ಪರಾಜಿತ ಬಿಜೆಪಿ ಅಭ್ಯರ್ಥಿ ಎ.ಮಂಜು ಹುಟ್ಟು ಹಬ್ಬದ ಬ್ಯಾನರ್‌ನಲ್ಲಿ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಭಾವಚಿತ್ರ ಹಾಕಿ ಶುಭಕೋರಲಾಗಿದೆ.

ನವೆಂಬರ್ 1ರಂದು ಎ.ಮಂಜು ಹುಟ್ಟುಹಬ್ಬ. ಹೀಗಾಗಿ ಅರಕಲಗೂಡು ತಾಲೂಕಿನ ರಾಮನಾಥಪುರದಲ್ಲಿ ಅಭಿಮಾನಿಗಳು ಕರ್ನಾಟಕ ರಾಜ್ಯೋತ್ಸವ ಹಾಗೂ ಎ.ಮಂಜು ಅವರ ಹುಟ್ಟು ಹಬ್ಬಕ್ಕೆ ಶುಭಕೋರಿ ಬೃಹತ್ ಬ್ಯಾನರ್ ಮಾಡಿಸಿ ಗ್ರಾಮದಲ್ಲಿ ಹಾಕಿದ್ದಾರೆ. ಈ ಬ್ಯಾನರ್ ಭಾರೀ ಚರ್ಚೆಗೆ ಕಾರಣವಾಗಿದೆ. ಏಕೆಂದರೆ ಲೋಕಸಭಾ ಚುನಾವಣೆ ವೇಳೆ ಕಾಂಗ್ರೆಸ್‍ನಿಂದ ಹೊರ ಬಂದಿದ್ದ ಎ.ಮಂಜು, ಹಾಸನ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿದ್ದರು. ಆದರೆ ಈಗ ಅವರ ಹುಟ್ಟು ಹಬ್ಬದ ಬ್ಯಾನರ್ ನಲ್ಲಿ ಸಿದ್ದರಾಮಯ್ಯ ಅವರ ಫೋಟೋ ಹಾಕಲಾಗಿದೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದ ಸರ್ಕಾರದಲ್ಲಿ ಎ.ಮಂಜು ಮಂತ್ರಿಯಾಗಿದ್ದರು. ಜೊತೆಗೆ ಸಿದ್ದರಾಮಯ್ಯ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿದ್ದರು. ಆದರೆ ಹಾಸನ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಪ್ರಜ್ವಲ್ ರೇವಣ್ಣ ಅವರನ್ನು ಕಣಕ್ಕೆ ಇಳಿಸಿದ್ದಕ್ಕೆ ಎ.ಮಂಜು ಭಾರೀ ವಿರೋಧ ವ್ಯಕ್ತಪಡಿಸಿದ್ದರು.

ಸದ್ಯ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಿ ಲೋಕಸಭಾ ಚುನಾವಣಾ ಸ್ಪರ್ಧೆ ಎದುರಿಸಿ, ಸೋತಿದ್ದರು.
ಎ.ಮಂಜು ಬಿಜೆಪಿಯಿಂದ ಹೊರ ಬಂದು ಮತ್ತೆ ಕಾಂಗ್ರೆಸ್ ಮನೆ ಸೇರುತ್ತಾರಾ? ಹಾಸನ ಜಿಲ್ಲೆಯಲ್ಲಿ ಅಸ್ತಿತ್ವ ಸಾಧಿಸಲು ಮುಂದಾಗಿದ್ದ ಬಿಜೆಪಿಗೆ ಹಿನ್ನಡೆಯಾಗುತ್ತಾ ಎಂಬ ಪ್ರಶ್ನೆಗಳು ರಾಜಕೀಯ ವಲಯದಲ್ಲಿ ಚರ್ಚೆಯಾಗುತ್ತಿವೆ.

ರಾಮನಾಥಪುರದ ಬೆಳಗುಲಿ ಗ್ರಾಮದಲ್ಲಿ ಅತಿ ಹೆಚ್ಚು ಕುರುಬರ ಇರುವುದರಿಂದ ಕಳೆದ ಬಾರಿ ಈ ಮಂಜು ಮಂತ್ರಿಯಾಗಿದ್ದಾಗ ಈ ಗ್ರಾಮಕ್ಕೆ ಕೆಲವು ಕಾಮಗಾರಿಗಳನ್ನು ಮಂಜೂರು ಮಾಡಿಕೊಟ್ಟಿದ್ದರು. ಹಾಗಾಗಿ ಜಾತಿ ಲೆಕ್ಕಾಚಾರದಲ್ಲಿ ಅಹಿಂದ ನಾಯಕ ಸಿದ್ದರಾಮಯ್ಯನವರ ಫೋಟೋ ಹಾಕಿದ್ರೆ, ಕಾಮಗಾರಿಗಳನ್ನು ನೀಡುವ ಮೂಲಕ ಗ್ರಾಮಕ್ಕೆ ಅಭಿವೃದ್ಧಿ ಕೆಲಸ ಮಾಡಿದ್ದರಿಂದಲೇ ಮಂಜು ಫೋಟೋ ಹಾಕಲಾಗಿದೆ ಎಂಬುದು ರಕ್ಷಣಾ ವೇದಿಕೆಯ ಸ್ವಾಭಿಮಾನಿ ಬಣದ ಮಾದೇಶ್ ರವರ ಮಾತಾಗಿತ್ತು.

ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.

Body:7203289

Conclusion:ಸುನೀಲ್ ಕುಂಭೇನಹಳ್ಳಿ, ಈಟಿವಿ ನ್ಯೂಸ್, ಹಾಸನ.
ETV Bharat Logo

Copyright © 2024 Ushodaya Enterprises Pvt. Ltd., All Rights Reserved.