ಹಾಸನ: ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ ಹೊಡೆದ ಪರಿಣಾಮ ತಂದೆ-ಮಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಚನ್ನರಾಯಪಟ್ಟಣ ಸಮೀಪದಲ್ಲಿ ನಡೆದಿದೆ.
ಧರಣಿ (32) ಮತ್ತು ನವ್ಯ (5) ಮೃತ ದುರ್ದೈವಿಗಳು. ದ್ವಿಚಕ್ರ ವಾಹನದಲ್ಲಿ ಸ್ವಗ್ರಾಮ ಡಿ.ಕರಡೇವುನಿಂದ ಉದಯಪುರಕ್ಕೆ ಹೋಗುತ್ತಿದ್ದ ಅಪ್ಪ-ಮಗಳಿಗೆ ಚನ್ನರಾಯಪಟ್ಟಣ ಸಮೀಪದ ಜೋಡಿಕಟ್ಟೆ ಹಿರೇಹಳ್ಳಿ ಗ್ರಾಮದ ರಾಷ್ಟ್ರೀಯ ದಾರಿ 75ರಲ್ಲಿ ಹಾಸನದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರೊಂದು ಡಿಕ್ಕಿ ಹೊಡೆದಿದೆ. ಕಾರು ಚಾಲಕನ ಅಜಾಗರೂಕತೆಯೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಚನ್ನರಾಯಪಟ್ಟಣ ಪೊಲೀಸರು ಭೇಟಿ ನೀಡಿ, ಮೃತದೇಹಗಳನ್ನು ಚನ್ನರಾಯಪಟ್ಟಣ ಸರ್ಕಾರಿ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಿದ್ದಾರೆ.
ಈ ಕುರಿತು ಚನ್ನರಾಯಪಟ್ಟಣ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.