ಹಾಸನ: ಸಾರಿಗೆ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಚಾಲಕ ಸೇರಿದಂತೆ ಬಸ್ನಲ್ಲಿದ್ದ ಹತ್ತಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕೆರೆ ಕೋಡಿಹಳ್ಳಿ ಬಳಿ ಈ ಘಟನೆ ನಡೆದಿದೆ. ದಾಂಡೇಲಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಾರಿಗೆ ಬಸ್ ಮತ್ತು ಬೆಂಗಳೂರಿನಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಮತ್ತೊಂದು ಸಾರಿಗೆ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. 13ಕ್ಕೂ ಅಧಿಕ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಇನ್ನುಳಿದ ಎಲ್ಲರೂ ಕೂಡ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಗಂಭೀರವಾಗಿ ಗಾಯಗೊಂಡಿರುವವರಿಗೆ ಅರಸೀಕೆರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.