ಹಾಸನ: ಆಕಸ್ಮಿಕವಾಗಿ ಬೆಂಕಿ ತಗಲಿ ಮನೆ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಹಾಸನ ತಾಲೂಕಿನ ದೊಡ್ಡಗದ್ದವಳ್ಳಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಜನಾರ್ಧನ್ ಅಯ್ಯಂಗಾರ್ ಎಂಬವರಿಗೆ ಸೇರಿದ ಮನೆ ಆಗಿದ್ದು ಇಂದು ಮುಂಜಾನೆ ಆಕಸ್ಮಿಕವಾಗಿ ಬೆಂಕಿ ಹೊತ್ತಿಕೊಂಡಿದ್ದು, ಬೆಂಕಿ ಕೆನ್ನಾಲಿ ಮತ್ತು ಬಿರುಗಾಳಿಯ ರಭಸಕ್ಕೆ ಬೆಂಕಿ ಹೆಚ್ಚಾಗಿದ್ದು ಮನೆಯಲ್ಲಿದ್ದ ಗೃಹಪಯೋಗಿ ವಸ್ತುಗಳು ಸೇರಿದಂತೆ ಮನೆಯ ಪಕ್ಕದಲ್ಲಿದ್ದ ಹುಲ್ಲಿನ ಬಣವೆಗೂ ಕೂಡ ಬೆಂಕಿ ತಗುಲಿ ಸಂಪೂರ್ಣ ಸುಟ್ಟು ಕರಕಲಾಗಿದೆ.
ಬೆಂಕಿ ಅವಘಡಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಕಳೆದ ವರ್ಷವೂ ಕೂಡ ಇವರದೇ ಮನೆ ಬೆಂಕಿಗೆ ಆಹುತಿಯಾಗಿತ್ತು. ದೇವಸ್ಥಾನದ ವಿಚಾರದಲ್ಲಿ ಕೆಲವು ರಾಜಿಗಳು ಕೂಡ ನಡೆದಿದ್ದವು. ಆದರೆ ಸ್ಪಷ್ಟವಾಗಿ ಇಂತಹ ವ್ಯಕ್ತಿಗಳ ಕೃತ್ಯ ಎಸಗಿದ್ದಾರೆ ಎಂಬುದಕ್ಕೆ ಯಾವುದೇ ಸಾಕ್ಷಿಗಳಿಲ್ಲ.
ಇನ್ನು ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವಲ್ಲಿ ಹರಸಾಹಸ ಪಡುತ್ತಿದ್ದಾರೆ. ಸ್ಥಳೀಯರು ಕೂಡ ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಸಾಥ್ ನೀಡಿದ್ದು ಬೆಂಕಿ ನಂದಿಸುವುದು ಒಳಗೆ ಮನೆಯಲ್ಲಿದ್ದ ಎಲ್ಲಾ ವಸ್ತುಗಳು ಕೂಡ ಬೆಂಕಿಗಾಹುತಿಯಾಗಿದೆ.
ಬೆಂಕಿ ಅವಘಡದಿಂದ ಲಕ್ಷಾಂತರ ರೂ ಮೌಲ್ಯದ ನಷ್ಟ ಉಂಟಾಗಿದ್ದು, ಈ ಸಂಬಂಧ ಹಾಸನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ಕೂಡ ದಾಖಲಾಗಿದೆ
.