ಹಾಸನ: ಕೋವಿಡ್-19 ಪ್ರಕರಣಗಳು ಹೆಚ್ಚಾಗುತ್ತಿರುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಾಗಿ ಕೇಂದ್ರ ಸರ್ಕಾರದ ಆದೇಶದಂತೆ ಅನ್‍ಲಾಕ್ 5.0ರ ಅನ್ವಯ ಮದುವೆ ಸಮಾರಂಭಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುವಂತಿಲ್ಲ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದ್ದಾರೆ.
ಜಿಲ್ಲೆಯ ಕಲ್ಯಾಣ ಮಂಟಪ ಹಾಗೂ ಹೋಟೆಲ್‍ಗಳಲ್ಲಿ ವಿವಾಹ ಹಾಗೂ ಇತರೆ ಕಾರ್ಯಕ್ರಮಗಳಲ್ಲಿ 200ಕ್ಕೂ ಹೆಚ್ಚು ಮಂದಿ ಸೇರುತ್ತಿರುವುದು ಗಮನಕ್ಕೆ ಬಂದಿದ್ದು, ಈ ರೀತಿಯಾಗಿ ಹೆಚ್ಚು ಮಂದಿ ಸೇರುವ ಯಾವುದೇ ಕಾರ್ಯಕ್ರಮದಲ್ಲಿ ಮುಖಗವಸು ಧರಿಸಬೇಕು.
ಅಲ್ಲದೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಿಕೆ, ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನಿಂಗ್ ಮತ್ತು ಕೈ ತೊಳೆಯುವಿಕೆ ಇಲ್ಲದಿರುವುದು ಕಂಡುಬಂದಲ್ಲಿ ಅಂತಹ ಹೋಟೆಲ್ ಅಥವಾ ಕಲ್ಯಾಣ ಮಂಟಪದ ಮಾಲೀಕರ ಮೇಲೆ ಹಾಗೂ ಕಾರ್ಯಕ್ರಮದ ಆಯೋಜಕರ ಮೇಲೆ ವಿಪತ್ತು ನಿರ್ವಹಣಾ ಕಾಯ್ದೆ ಪ್ರಕಾರ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.