ಹಾಸನ: ವಿರಾಟ್ ಮತ್ತು ಶ್ರೀಲೀಲಾ ಜೋಡಿ ನಾಯಕ-ನಾಯಕಿಯರಾಗಿ ನಟಿಸಿರುವ ಕಿಸ್ ಚಿತ್ರ ರಾಜ್ಯಾದ್ಯಂತ ಉತ್ತಮ ಪ್ರದರ್ಶನ ಕಾಣುತ್ತಿದ್ದು, ಹಾಸನದ ಗುರು ಚಿತ್ರಮಂದಿರಕ್ಕ ವಿರಾಟ್ ಭೇಟಿ ನೀಡಿ ಅಭಿಮಾನಿಗಳೊಟ್ಟಿಗೆ ಸಿನಿಮಾ ವೀಕ್ಷಿಸಿದ್ದಾರೆ.
ಹಾಡುಗಳ ಮೂಲಕವೇ ಹೆಚ್ಚಿನ ಸಂಖ್ಯೆಯಲ್ಲಿ ಪ್ರೇಕ್ಷಕರನ್ನು ಸೆಳೆಯುತ್ತಿರುವ ಈ ಚಿತ್ರ ಕಳೆದ ತಿಂಗಳ 27ರಂದು ರಾಜ್ಯಾದ್ಯಂತ ರಿಲೀಸ್ ಆಗಿದ್ದು, ಉತ್ತಮ ಪ್ರದರ್ಶನ ಕಾಣುತ್ತಿದೆ. ಅಂತೆಯೇ ಹಾಸನದಲ್ಲೂ ಚಿತ್ರಕ್ಕೆ ಪ್ರೇಕ್ಷಕರು ಬಹುಪರಾಕ್ ಎಂದಿದ್ದು, ಈ ಹಿನ್ನಲೆಯಲ್ಲಿ ಹಾಸನಕ್ಕೆ ಭೇಟಿ ನೀಡಿದ್ದರು.
ಈ ವೇಳೆ ನೆಚ್ಚಿನ ನಾಯಕನನ್ನು ಅಭಿಮಾನಿಗಳು ಪಟಾಕಿ ಸಿಡಿಸಿ, ಡ್ರಂ ಸೆಟ್ ಭಾರಿಸುವ ಮೂಲಕ ಅದ್ಧೂರಿಯಾಗಿ ಬರ ಮಾಡಿಕೊಂಡರು. ಇದೇ ವೇಳೆ ವಿರಾಟ್ ಅವರೊಟ್ಟಿಗೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ರು.