ಅರಕಲಗೂಡು: ತಾಲೂಕಿನ ರಾಮಾನಾಥಪುರ ಮತ್ತು ಕೇರಳಾಪುರದಲ್ಲಿ ತೆರೆದಿರುವ ಚೆಕ್ ಪೋಸ್ಟ್ಗೆ ಅಪರ ಜಿಲ್ಲಾಧಿಕಾರಿ ಕವಿತಾ ರಾಜಾರಾಂ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಕೊರೊನಾ ಸೋಂಕು ತಡೆಗಟ್ಟಲು ಜಿಲ್ಲಾಡಳಿತ ಕಟ್ಟುನಿಟ್ಟಾಗಿ ಕೆಲಸ ಮಾಡುತ್ತಿದೆ. ಚೆಕ್ ಪೋಸ್ಟ್ಗಳಲ್ಲಿ ಹೊರಗಿನಿಂದ ಬರುವ ವ್ಯಕ್ತಿಗಳನ್ನು ತಪಾಸಣೆ ಮಾಡಬೇಕು. ಅನವಶ್ಯಕವಾಗಿ ಸಂಚರಿಸುವ ವಾಹನಗಳಿಗೆ ಅವಕಾಶ ನೀಡಬಾರದು ಎಂದು ಇಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಗೆ ಸೂಚನೆ ನೀಡಿದರು.
ಈ ಸಂದರ್ಭ ತಹಶೀಲ್ದಾರ್ ವೈ.ಎಂ.ರೇಣುಕುಮಾರ್, ವೈದ್ಯ ಮಾದವರಾವ್, ಪಿಡಿಒ ವಿಜಯಕುಮಾರ, ಆರೋಗ್ಯ ನಿರೀಕ್ಷಕ ಲೋಕೇಶ್ ಸೇರಿದಂತೆ ಇತರ ಅಧಿಕಾರಿಗಳು ಹಾಜರಿದ್ದರು.