ಹಾಸನ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಹಾಸನ ಕ್ಷೇತ್ರದ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಪ್ರಜ್ವಲ್ ರೇವಣ್ಣ ಇಂದು ನಾಮಪತ್ರ ಸಲ್ಲಿಸಿದರು.
ಪ್ರಜ್ವಲ್ ರೇವಣ್ಣನ ಜೊತೆ ತಂದೆ ಸಚಿವ ಎಚ್. ಡಿ .ರೇವಣ್ಣ ಹಾಗೂ ತಾಯಿ ಭವಾನಿ ರೇವಣ್ಣ ಹಾಗೂ ಸಿಎಂ ಸಂಸದೀಯ ಕಾರ್ಯದರ್ಶಿ ಕಾಂಗ್ರೆಸ್ನ ಎಂಎಲ್ಸಿ ಎಂ.ಗೋಪಾಲಸ್ವಾಮಿ ನಾಮಪತ್ರ ಸಲ್ಲಿಸುವ ವೇಳೆ ಹಾಜರಿದ್ದರು. ಅಷ್ಟೇ ಅಲ್ಲದೆ ಜೆಡಿಎಸ್ ಹಾಗೂ ಕಾಂಗ್ರೆಸ್ ಕಾರ್ಯಕರ್ತರುಗಳು ಸಾವಿರಾರು ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾರ್ಯಕ್ರಮ ಮುಗಿದ ಬಳಿಕ ಕಡೂರು ಭಾಗದಿಂದ ಬಂದಿದ್ದ ಜನರಿಗೆ, ಕಾರ್ಯಕರ್ತರಿಗೆ ಜೆಡಿಎಸ್ ಮುಖಂಡರು ಹಣ ಹಂಚಿಕೆ ಮಾಡುತ್ತಿರುವ ದೃಶ್ಯ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ವೈರಲ್ ಆಗಿದೆ.