ಹಾಸನ: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಹಾನ್ ದೈವಭಕ್ತರು. ಅವರ ಮೇಲೆ ಮತ್ತು ಸರ್ಕಾರದ ಮೇಲೆ ದೇವರ ಆಶೀರ್ವಾದ ಸದಾ ಇರುವುದರಿಂದ ಸರ್ಕಾರಕ್ಕೆ ಯಾವುದೇ ಅಪಾಯವಿಲ್ಲ ಎಂದು ಮುಜರಾಯಿ ಇಲಾಖೆ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಹೇಳಿದರು.
ಹಾಸನಾಂಬೆ ದೇವಾಲಯದಲ್ಲಿ ತಾಯಿಯ ದರ್ಶನ ಪಡೆದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದೇ ಮೊದಲ ಬಾರಿಗೆ ಹಾಸನಾಂಬೆ ದೇವಿಯ ದರ್ಶನ ಪಡೆದಿದ್ದೇನೆ. ಈ ಬಾರಿ ಮುಜರಾಯಿ ಇಲಾಖೆಯ ಸಚಿವನಾಗಿದ್ದು, ರಾಜ್ಯದಲ್ಲಿನ ಎಲ್ಲಾ ದೇವಾಲಯಗಳ ಅಭಿವೃದ್ಧಿಗೆ ಶ್ರಮಿಸುವ ಮೂಲಕ ಪ್ರವಾಸೋದ್ಯಮಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.
ಮುಂಬರುವ ಉಪ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಅತಿ ಹೆಚ್ಚು ಸ್ಥಾನ ಗೆಲ್ಲುವ ವಿಶ್ವಾಸವಿದೆ. ಅನರ್ಹ ಶಾಸಕರಿಗೆ ಕೋರ್ಟ್ ತೀರ್ಪು ಬಂದ ನಂತರವಷ್ಟೇ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಸರ್ಕಾರಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ ಎಂದರು.