ETV Bharat / state

ಹಾಸನ: ನೈಟ್​ ಶಿಫ್ಟ್​ ಮುಗಿಸಿ ಮನೆಗೆ ಹೋಗುತ್ತಿದ್ದ ಆ್ಯಂಬುಲೆನ್ಸ್​ ಚಾಲಕ ಅಪಘಾತದಲ್ಲಿ ಸಾವು - ಹಾಸನದಲ್ಲಿ ಆ್ಯಂಬುಲೆನ್ಸ್​​ ಚಾಲಕ ಸಾವು

ಗೂಡ್ಸ್ ಲಾರಿ ಹಾಗೂ ದ್ವಿಚಕ್ರ ವಾಹನದ ನಡುವೆ ಅಪಘಾತ ಸಂಭವಿಸಿ, ದ್ವಿಚಕ್ರ ವಾಹನ ಸವಾರ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಮೃತ ವ್ಯಕ್ತಿಯು ಆ್ಯಂಬುಲೆನ್ಸ್​​ ಚಾಲಕನಾಗಿದ್ದು, ಕರ್ತವ್ಯ ಮುಗಿಸಿ ಮನೆಗೆ ತೆರಳುವಾಗ ಈ ಅವಘಡ ನಡೆದಿದೆ.

Ambulance driver dies lorry accident in Hassan
ಗೂಡ್ಸ್ ಲಾರಿ ಹಾಗೂ ದ್ವಿಚಕ್ರ ಡಿಕ್ಕಿ
author img

By

Published : Apr 24, 2020, 10:35 AM IST

ಹಾಸನ: ದ್ವಿಚಕ್ರ ವಾಹನಕ್ಕೆ ಗೂಡ್ಸ್ ಲಾರಿ ಡಿಕ್ಕಿ ಹೊಡೆದು, ಆ್ಯಂಬುಲೆನ್ಸ್​​ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹಾಸನದಲ್ಲಿ ನಡೆದಿದೆ. ಕೃಷ್ಣಮೂರ್ತಿ (32) ಸಾವನ್ನಪ್ಪಿದ್ದು, ಆ್ಯಂಬುಲೆನ್ಸ್ ಚಾಲಕನಾಗಿದ್ದ. ರಾತ್ರಿ ಪಾಳಯದ ಕರ್ತವ್ಯ ಮುಗಿಸಿ ಸ್ವಗ್ರಾಮ ರಾಜೇನಹಳ್ಳಿಗೆ ತನ್ನ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ವೇಳೆ, ಎದುರಿನಿಂದ ಬಂದ ಲಾರಿಯೊಂದು ಡಿಕ್ಕಿ ಹೊಡೆದು ಅಸುನೀಗಿದ್ದಾನೆ.

ಹಾಸನದ ಹೊಸ ಬಸ್ ನಿಲ್ದಾಣದ ಸಮೀಪ ಈ ದುರ್ಘಟನೆ ನಡೆದಿದ್ದು, ಅಪಘಾತಕ್ಕೆ ಲಾರಿ ಚಾಲಕನ ನಿರ್ಲಕ್ಷ್ಯ ಮತ್ತು ಅತಿವೇಗವೇ ಕಾರಣವಾಗಿದೆ ಎನ್ನಲಾಗಿದೆ. ಹಾಸನ ನಗರ ಸಂಚಾರ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನೆ ಮಾಡಲಾಗಿದೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.