ಅರಸೀಕೆರೆ : ಕೊರೊನಾ ಸೋಂಕಿತ ವ್ಯಕ್ತಿ ಚಿಕಿತ್ಸೆ ಪಡೆದಿರುವ ಹಿನ್ನೆಲೆ ಪಟ್ಟಣದ ಜಯಚಾಮರಾಜೇಂದ್ರ ಆಸ್ಪತ್ರೆಯ ಅರ್ಧ ಭಾಗವನ್ನು ಸೀಲ್‌ಡೌನ್ ಮಾಡಲಾಗಿದೆ ಎಂದು ವೈದ್ಯಾಧಿಕಾರಿ ಕರಿಯಪ್ಪ ತಿಳಿಸಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಅನಾರೋಗ್ಯ ಪೀಡಿತ ವ್ಯಕ್ತಿಯೊಬ್ಬರು ಆಸ್ಪತ್ರೆಗೆ ಬಂದು ಚಿಕಿತ್ಸೆ ಪಡೆದಿದ್ದರು. ಇದೀಗ ಆತನ ಗಂಟಲು ದ್ರವದ ಪರೀಕ್ಷಾ ವರದಿ ಪಾಸಿಟಿವ್ ಬಂದಿದೆ. ವರದಿ ಬರುವ ತನಕ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿರುವ ಹಿನ್ನೆಲೆ ಅರ್ಧ ಭಾಗವನ್ನು 72 ಗಂಟೆಗಳ ಕಾಲ ಸೀಲ್‌ಡೌನ್ ಮಾಲಾಗಿದೆ. ಅಲ್ಲದೆ ದಿನಕ್ಕೆ ಎರಡು ಬಾರಿ ಸ್ಯಾನಿಟೈಸ್ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಸದ್ಯ, ಆಸ್ಪತ್ರೆಯಲ್ಲಿ ತುರ್ತು ಸೇವೆ, ಒಪಿಡಿ ತೆರೆಯಲಾಗಿದೆ, ಅಗತ್ಯವಿರುವವರು ಆಸ್ಪತ್ರೆಗೆ ಆಗಮಿಸಬಹುದು. ಹೆಚ್ಚಿನ ಚಿಕಿತ್ಸೆಯ ಅವಶ್ಯಕತೆಯಿದ್ದರೆ ಹಾಸನಕ್ಕೆ ಕಳುಹಿಸಲಾಗುತ್ತಿದೆ. ಆಸ್ಪತ್ರೆ ವೈದ್ಯರು, ಸಿಬ್ಬಂದಿಯನ್ನು ಈಗಾಗಲೇ ಪರೀಕ್ಷೆ ಮಾಡಲಾಗಿದ್ದು, ಎಲ್ಲರ ವರದಿ ನೆಗೆಟಿವ್ ಬಂದಿದೆ. ಸೋಂಕಿತ ವ್ಯಕ್ತಿಯನ್ನು ಕೋವಿಡ್ ಕೇಂದ್ರಕ್ಕೆ ಕಳುಹಿಸಲಾಗಿದೆ.