ETV Bharat / state

ಹಾಸನ: 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದು ಹಾಕಿ ಕಿಡಿಗೇಡಿಗಳ ದುಷ್ಕೃತ್ಯ - ಹಾಸನದಲ್ಲಿ ಅಡಕೆ ಗಿಡ ನಾಶ

ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಬೆಳೆದ ಬೆಳೆ ನೀರು ಪಾಲಾಗಿದ್ದು, ರೈತರು ಹೈರಾಣಾಗಿದ್ದಾರೆ. ಇದರ ನಡುವೆಯೇ ಇಂತಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೆಯುತ್ತಿದ್ದು ಅಮಾನವೀಯತೆಗೆ ತಕ್ಕ ಶಿಕ್ಷೆಯಾದಾಗ ಮಾತ್ರ ರೈತರಿಗೆ ನ್ಯಾಯ ಸಿಗುತ್ತದೆ.

Arecanut tree destroyed in Hassan
ಕಿಡಿಗೇಡಿಗಳ ಕೃತ್ಯಕ್ಕೆ ಫಸಲಿಗೆ ಬಂದಿದ್ದ ಅಡಿಕೆ ಮರ ಸರ್ವನಾಶ
author img

By

Published : Jan 2, 2022, 7:09 AM IST

Updated : Jan 2, 2022, 8:18 AM IST

ಹಾಸನ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ದ್ರಾಕ್ಷಿ ಗಿಡಗಳನ್ನು ನಾಶ ಮಾಡಿದ ಪ್ರಕರಣ ಮಾಸುವ ಮುನ್ನವೇ ಹಾಸನ ಜಿಲ್ಲೆಯಲ್ಲಿ ಫಸಲಿಗೆ ಬಂದಿದ್ದ 500ಕ್ಕೂ ಹೆಚ್ಚು ಅಡಿಕೆ ಗಿಡಗಳನ್ನು ಕಡಿದು ಹಾಕಿರುವ ಘಟನೆ ನಡೆದಿದೆ.

ಬೇಲೂರು ತಾಲೂಕಿನ ಅಜ್ಜೇನಹಳ್ಳಿಯಲ್ಲಿ ಗ್ರಾಮದ ವೀರಲಿಂಗೇಗೌಡರಿಗೆ ಸೇರಿದ ಅಡಿಕೆ ಗಿಡಗಳನ್ನು ದುಷ್ಕರ್ಮಿಗಳು ಕಡಿದು ಹಾಕಿದ್ದಾರೆ. ಈ ಗಿಡಗಳನ್ನು ನೆಟ್ಟು ಆರು ವರ್ಷಗಳಾಗಿದ್ದು, ಫಸಲಿಗೆ ಬರುತ್ತಿತ್ತು. ಆದರೆ, ಕಿಡಿಗೇಡಿಗಳು ಫಸಲು ಕೈ ಸೇರುವ ಮೊದಲೇ ನಾಶಪಡಿಸಿದ್ದಾರೆ.

ಅಡಿಕೆ ಗಿಡಗಳಿಗೆ ನೀರು ಹಾಕಲು ಹೋದಾಗ ಕೃತ್ಯ ಬೆಳಕಿಗೆ ಬಂದಿದೆ. ಹಳೇಬೀಡು ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಬೇಲೂರು ತಹಶೀಲ್ದಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.

ಈ ಕುರಿತು ಮಾತನಾಡಿದ ತಹಶೀಲ್ದಾರ್, 'ಇದು ಆರು ವರ್ಷದ ಗಿಡ ಎಂದು ಹೇಳುತ್ತಿದ್ದಾರೆ. ಕೆಲವು ಗಿಡಗಳು ಚೆನ್ನಾಗಿ ಬಂದಿದ್ದು, ಕೆಲವು ಚೆನ್ನಾಗಿ ಬಂದಿಲ್ಲ. ನಾಶವಾಗಿರುವ ಬೆಳೆಗೆ ಸರಿಯಾದ ಪರಿಹಾರ ನೀಡಲಾಗುವುದು' ಎಂದು ಭರವಸೆ ನೀಡಿದರು.

'ಮಕ್ಕಳನ್ನು ದುಡಿಮೆಗೆ ಬೇಕರಿಗೆ ಕಳುಹಿಸಿ, ನಾವಿಲ್ಲಿ ಹೊಲದಲ್ಲಿ ಕಷ್ಟಪಟ್ಟು ಕೆಲಸ ಮಾಡಿದ್ದೇವೆ. ನಮ್ಮ ಬೆಳೆ ಹಾಳು ಮಾಡಿದ ದುಷ್ಕರ್ಮಿಗಳು ಬೆಳಕಿಗೆ ಬರಬೇಕು. ಅವರಿಗೆ ತಕ್ಕ ಶಿಕ್ಷೆಯಾಗಬೇಕು' ಎಂದು ಜಮೀನಿನ ಮಾಲೀಕರು ಕೇಳಿಕೊಂಡಿದ್ದಾರೆ.

Arecanut tree destroyed in Hassan
ಕಿಡಿಗೇಡಿಗಳ ಕೃತ್ಯಕ್ಕೆ ಫಸಲಿಗೆ ಬಂದಿದ್ದ ಅಡಿಕೆ ಮರ ಸರ್ವನಾಶ

ರಾಜ್ಯದಲ್ಲಿ ಈ ರೀತಿಯ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಪಿ. ರಂಗನಾಥಪುರದಲ್ಲಿ ಕೆಲವು ಕಿಡಿಗೇಡಿಗಳು ದ್ರಾಕ್ಷಿ ಬೆಳೆ ನಾಶ ಮಾಡಿದ್ದರು.

ಈ ಬಾರಿ ಸುರಿದ ಅಕಾಲಿಕ ಮಳೆಯಿಂದ ಬೆಳೆದ ಬೆಳೆ ನೀರು ಪಾಲಾಗಿದ್ದು, ರೈತರು ಹೈರಾಣಾಗಿದ್ದಾರೆ. ಇದರ ನಡುವೆಯೇ ಇಂತಹ ದುಷ್ಕೃತ್ಯಗಳು ಮೇಲಿಂದ ಮೇಲೆ ನಡೆಯುತ್ತಿದ್ದು ಅಮಾನವೀಯತೆಗೆ ತಕ್ಕ ಶಿಕ್ಷೆಯಾದಾಗ ಮಾತ್ರ ರೈತರಿಗೆ ನ್ಯಾಯ ಸಿಗುತ್ತದೆ.

ಇದನ್ನೂ ಓದಿ: ರಾಜ್ಯದಲ್ಲಿ ಸಂಪೂರ್ಣ ಪ್ರಗತಿ ಕಾಣದ ಆಕ್ಸಿಜನ್ ಘಟಕಗಳ ಸ್ಥಾಪನೆ : ನಿಮ್ಮ ಜಿಲ್ಲೆಯಲ್ಲಿ ಎಷ್ಟಿವೆ ?

Last Updated : Jan 2, 2022, 8:18 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.