ETV Bharat / state

ಅಕ್ರಮ ಗಣಿಗಾರಿಕೆ : ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು..

ಅರಕೆರೆ ಸರ್ವೆ ನಂ.180, ಬೈರಾಪುರದ ಸರ್ವೆ ನಂ.21ರಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಬಲಾಢ್ಯರು ನೈಸರ್ಗಿಕ ಸಂಪನ್ಮೂಲ ನಾಶ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

Arekere villagers
ಮನವಿ
author img

By

Published : Feb 29, 2020, 1:17 PM IST

ಹಾಸನ : ಅರಸೀಕೆರೆ ತಾಲೂಕಿನ ಜಾವಗಲ್ ಹೋಬಳಿ ಅರಕೆರೆ ಗ್ರಾಮದಲ್ಲಿ ಅಕ್ರಮ ಗಣಿಗಾರಿಕೆ ನಡೆಸಲಾಗುತ್ತಿದೆ ಎಂದು ಆರೋಪಿಸಿ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಪತ್ರ ಸಲ್ಲಿಸಿದರು.

ಜಿಲ್ಲಾಧಿಕಾರಿಳಿಗೆ ಮನವಿ ಸಲ್ಲಿಸಿದ ಗ್ರಾಮಸ್ಥರು

ಅರಕೆರೆ ಸರ್ವೆ ನಂ.180, ಬೈರಾಪುರದ ಸರ್ವೆ ನಂ.21ರಲ್ಲಿ ಕಲ್ಲು ಗಣಿಗಾರಿಕೆ ನಡೆಯುತ್ತಿದೆ. ಜಿಲ್ಲಾಡಳಿತದ ಅನುಮತಿ ಪಡೆಯದೆ ಬಲಾಢ್ಯರು ನೈಸರ್ಗಿಕ ಸಂಪನ್ಮೂಲ ನಾಶ ಮಾಡುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಆಗ್ರಹಿಸಿದರು.

ಗಣಿಗಾರಿಕೆಯಿಂದ ಸ್ಥಳೀಯರಿಗೆ ಭಾರಿ ತೊಂದರೆಯಾಗುತ್ತಿದೆ. ರಾತ್ರಿ ಸಮಯದಲ್ಲಿ ಸಿಡಿಮದ್ದುಗಳನ್ನು ಸಿಡಿಸುತ್ತಿದ್ದು, ಗ್ರಾಮಸ್ಥರು ಆತಂಕ ಪಡುವಂತಾಗಿದೆ. ಅಂತರ್ಜಲ ಕುಸಿದು ಕುಡಿಯುವ ನೀರಿಗೂ ಸಮಸ್ಯೆ ಎದುರಾಗಿದೆ. ಉಳುಮೆ ಮಾಡಬೇಕಿರುವ ಜಮೀನಿನಲ್ಲಿ ಕಲ್ಲಿನ ಚೂರುಗಳು ಬಿದ್ದಿದ್ದು ಜೀವನವೇ ಸಾಕು ಎನ್ನುವಷ್ಟರ ಮಟ್ಟಿಗೆ ಜಿಗುಪ್ಸೆ ಬಂದಿದೆ. ಈ ಬಗ್ಗೆ ಅಧಿಕಾರಿಗಳು ಕೂಡಲೇ ಸ್ಥಳ ಪರಿಶೀಲನೆ ನಡೆಸಿ ಗಣಿಗಾರಿಕೆಗೆ ನಿಷೇಧ ಹೇರಬೇಕೆಂದು ಒತ್ತಾಯಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.