ಹಾಸನ: ಮನೆಗಳ್ಳತನ ಮಾಡುತ್ತಿದ್ದ ಕಳ್ಳನನ್ನು ಸಕಲೇಶಪುರ ಪೊಲೀಸರು ಬಂಧಿಸಿದ್ದಾರೆ.
ಉಮೇಶ್ (42) ಬಂಧಿತ ವ್ಯಕ್ತಿ.ಈತ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಗುಜ್ಙೇನಹಳ್ಳಿ ಗ್ರಾಮದ ನಿವಾಸಿ.
ಬಂಧಿತನಿಂದ ಸುಮಾರು ₹ 5 ಲಕ್ಷ ಮೌಲ್ಯದ 163 ಗ್ರಾಂ ಚಿನ್ನಾಭರಣವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.
ಪಟ್ಟಣದ ವಕೀಲರ ಮನೆ ಸೇರಿದಂತೆ ಎರಡು ಮನೆಗಳಲ್ಲಿ ಕಳವು ಮಾಡಿದ್ದಾಗಿ ವಿಚಾರಣೆ ವೇಳೆ ಆತ ಒಪ್ಪಿಕೊಂಡಿದ್ದಾನೆ. ಸಕಲೇಶಪುರ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು ಆರೋಪಿಯನ್ನು ಜೈಲಿಗಟ್ಟಿದ್ದಾರೆ.