ಹಾಸನ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದಿಂದ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
ತಿಂಗಳ ಕೆಲಸಕ್ಕೆ ತಕ್ಕಷ್ಟು ಹಣ ಸಿಗುತ್ತಿಲ್ಲ. ಇಲಾಖೆ ಹಾಗೂ ಸರ್ಕಾರದ ನಿರ್ಲಕ್ಷ್ಯದಿಂದಾಗಿ ಕಾರ್ಯಕರ್ತೆಯರ ಕುಟುಂಬಗಳು ತೀವ್ರ ಆರ್ಥಿಕ ತೊಂದರೆ ಎದುರಿಸುವಂತಾಗಿದೆ ಎಂದು ಕಾರ್ಯಕರ್ತರು ನೋವು ತೋಡಿಕೊಂಡಿದ್ದಾರೆ.
ರಾಜ್ಯದ ಎಲ್ಲ ಆಶಾ ಕಾರ್ಯಕರ್ತೆಯರು ಮುಷ್ಕರ ಸ್ಥಗಿತಗೊಳಿಸಿ 50 ದಿನ ಕಳೆದರೂ ಸರ್ಕಾರದ ಕಡೆಯಿಂದ ಯಾವ ಅಧಿಕೃತ ಘೋಷಣೆಯೂ ಬಂದಿಲ್ಲ. ಸರ್ಕಾರವು ಕೂಡಲೇ ಬೇಡಿಕೆಗಳ ಬಗ್ಗೆ ಸೂಕ್ತ ಕ್ರಮ ಕೈಗೊಂಡು ಆರ್ಥಿಕ ಸಂಕಷ್ಟದಲ್ಲಿರುವ ಈ ಕಾರ್ಯಕರ್ತೆಯರಿಗೆ ಸೂಕ್ತ ಪರಿಹಾರ ನೀಡಲು ಮನವಿ ಮಾಡಿದರು.