ETV Bharat / state

ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ: ಹಾಸನದಲ್ಲಿ ಎಎಸ್‌ಐ, ಹೆಡ್‌ಕಾನ್ಸ್‌ಟೇಬಲ್‌ ಸಸ್ಪೆಂಡ್‌ - ಮಧ್ಯ ಪಾರ್ಟಿಯಲ್ಲಿ ಭಾಗವಹಿಸಿದ ಪೊಲೀಸರು ಅಮಾನತು

ಮದ್ಯದ ಪಾರ್ಟಿಯಲ್ಲಿ ಭಾಗಿಯಾದ ಆರೋಪದ ಮೇಲೆ ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯ ಎಎಸ್​ಐ ಹಾಗೂ ಹೆಡ್​ ಕಾನ್ಸ್​ಟೇಬಲ್ ಅಮಾನತುಗೊಂಡಿದ್ದಾರೆ.

asi-and-head-constable-suspended-in-hassan
ಸಮವಸ್ತ್ರದಲ್ಲೇ ಎಣ್ಣೆ ಪಾರ್ಟಿ: ಇಬ್ಬರು ಪೊಲೀಸರನ್ನು ಅಮಾನತುಗೊಳಿಸಿದ ಹಾಸನ ಎಸ್​ಪಿ
author img

By

Published : Oct 20, 2021, 11:51 AM IST

ಹಾಸನ: ಪೊಲೀಸ್ ಸಮವಸ್ತ್ರದಲ್ಲಿ ಮದ್ಯದ ಪಾರ್ಟಿಯಲ್ಲಿ ಭಾಗಿಯಾದ ಆರೋಪದ ಮೇಲೆ ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯ ಎಎಸ್​ಐ ಹಾಗೂ ಹೆಡ್​ ಕಾನ್ಸ್​ಟೇಬಲ್​ ಅನ್ನು ಸೇವೆಯಿಂದ ಅಮಾನತುಗೊಳಿಸಿ ಎಸ್​​ಪಿ ಶ್ರೀನಿವಾಸಗೌಡ ಆದೇಶ ಹೊರಡಿಸಿದ್ದಾರೆ.

ಲಕ್ಷ್ಮಿಪುರಂ ಬಡಾವಣೆಯಲ್ಲಿರುವ ಖಾಸಗಿ ಬಾರೊಂದರಲ್ಲಿ ಪೊಲೀಸರು ಸಮವಸ್ತ್ರದಲ್ಲಿಯೇ ಮದ್ಯ ಸೇವಿಸುತ್ತಿದ್ದರು ಎನ್ನಲಾಗಿದೆ. ವ್ಯಕ್ತಿಯೊಬ್ಬರು ತಮ್ಮ‌ ಮೊಬೈಲ್‌ನಲ್ಲಿ ಈ ವಿಡಿಯೋ ಸೆರೆಹಿಡಿದಿದ್ದು, ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು.

ವಿಡಿಯೋ ವೈರಲ್ ಆಗುತ್ತಿದ್ದಂತೆ ಹಾಸನ ನಗರದ ಪೆನ್ಷನ್ ಮೊಹಲ್ಲಾ ಠಾಣೆಯ ಎಎಸ್ಐ ರಂಗಸ್ವಾಮಿ ಹಾಗೂ ಹೆಡ್​ ಕಾನ್ಸ್​ಟೇಬಲ್​ ರಾಮೇಗೌಡ ಅವರನ್ನು ಅಮಾನತು ಮಾಡಲಾಗಿದೆ. ಈ ಬಗ್ಗೆ ಎಸ್​​ಪಿ ಶ್ರೀನಿವಾಸಗೌಡ ಅವರು ಆದೇಶಿಸಿದ್ದಾರೆ.

ಇದನ್ನೂ ಓದಿ: ವಿಜಯಪುರ: ಕೆಟ್ಟು ನಿಂತ ಲಾರಿಗೆ ಕಾರು ಡಿಕ್ಕಿ; ಮಗು ಸೇರಿ ನಾಲ್ವರು ಸ್ಥಳದಲ್ಲೇ ಸಾವು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.