ಹಾಸನ: ದಲಿತ ಯುವಕ ಪ್ರದೀಪ್ ಎಂಬಾತನ ಮೇಲೆ ಹಲ್ಲೆ ಪಿಎಸ್ಐ ಸಾಗರ್ ವಿನಾ ಕಾರಣ ಹಲ್ಲೆ ನಡೆಸಿದ್ದಾರೆ. ಅವರನ್ನು ಕೂಡಲೇ ವರ್ಗಾವಣೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಲಾಯಿತು
ತಾಲೂಕಿನ ಕೊಣನೂರು ಗ್ರಾಮದ ಪರಿಶಿಷ್ಟ ಜಾತಿ ಮತ್ತು ವರ್ಗದ ಮುಖಂಡರು ಪ್ರತಿಭಟನೆ ನಡೆಸುವ ಮೂಲಕ ಪಿಎಸ್ಐ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಆಗ್ರಹಿಸಿದರು.
ಈ ಹಲ್ಲೆಗೆ ಸಂಬಂಧಿಸಿದಂತೆ ದಲಿತರ ದೌರ್ಜನ್ಯ ತಡೆ ಕಾಯ್ದೆ ಅಡಿ ದೂರು ದಾಖಲಿಸಬೇಕು ಎಂದು ಒತ್ತಾಯಿಸಿದರು.