ಹಾಸನ: ಬೇಲೂರು ತಾಲೂಕಿನ ಸಾಮಾಜಿಕ ಕಾರ್ಯಕರ್ತ ಕೆ.ಎಸ್. ತೀರ್ಥಪ್ಪ ಎನ್ನುವರ ಮೇಲೆ ಅವರ ಪುತ್ರನೇ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಗಾಯಾಳುವನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಬೇಲೂರು ತಾಲೂಕಿನ ಕಸಗೊಂಡು ಗ್ರಾಮದ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಆಸ್ತಿ ವಿಚಾರವೇ ಗಲಾಟೆಗೆ ಕಾರಣ ಎನ್ನಲಾಗಿದೆ.
ತಾಲೂಕಿನ ವಿವಿಧ ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಧಿಕಾರಿ ಕಚೇರಿ, ವಿಧಾನಸೌಧದವರೆಗೆ ಏಕಾಂಗಿಯಾಗಿ ಹೋರಾಟ ನಡೆಸುತ್ತಿದ್ದ ತೀರ್ಥಪ್ಪ ಸಾಮಾಜಿಕ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಅರೇಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.