ಹಾಸನ : ಚಾಕುವಿನಿಂದ ಇರಿದು ಆಟೋ ಚಾಲಕನೋರ್ವನನ್ನು ಕೊಲೆಗೈದಿರುವ ಘಟನೆ ಹಾಸನ ಜಿಲ್ಲೆಯ ಹೊರವಲಯದಲ್ಲಿ ನಡೆದಿದೆ. ಗಿರೀಶ್ (29) ಎಂಬಾತ ಕೊಲೆಯಾದ ಆಟೋ ಚಾಲಕ. ಹಾಸನದ ಹೊಸ ಬಸ್ ನಿಲ್ದಾಣ ಸಮೀಪದ ಹೊಸಕೊಪ್ಪಲು ವೃತ್ತದಲ್ಲಿ ಈ ಘಟನೆ ನಡೆದಿದೆ.
ಗಿರೀಶ್ ಬೆಳಗಿನ ಜಾವ ಹಾಸನ ಹೊರ ವಲಯದ ಹೀಮತ್‌ಸಿಂಗ್ ಕಾರ್ಖಾನೆಯಲ್ಲಿ ಕೆಲಸ ಮಾಡಿಕೊಂಡು ಸಂಜೆ ಸಮಯದಲ್ಲಿ ಆಟೋ ಚಾಲಕನಾಗಿ ಕೆಲಸ ಮಾಡುತ್ತಿದ್ದ. ಯಾರೋ ದುಷ್ಕರ್ಮಿಗಳು ಆತನನ್ನು ಕೊಲೆಗೈದು ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಹೆಚ್ಚುವರಿ ಪೊಲೀಸ್ ಅಧಿಕಾರಿ ಎಸ್ಪಿ ನಂದಿನಿ ಹಾಗೂ ಬಡಾವಣೆ ಪೊಲೀಸ್ ಠಾಣೆಯ ಉಪನಿರೀಕ್ಷಕ ಕೃಷ್ಣರಾಜು ಭೇಟಿ ನೀಡಿದ್ದರು. ಸದ್ಯ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಹಾಸನದಲ್ಲಿ ಆಸ್ಪತ್ರೆಗೆ ರವಾನೆ ಮಾಡಿದ್ದು, ಈ ಸಂಬಂಧ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.