ಹಾಸನ: ಸಮಾಜದ ವಿವಿಧ ಕ್ಷೇತ್ರದಲ್ಲಿ ಗಂಡು ಮಕ್ಕಳಿಗಿಂತ ಹೆಣ್ಣುಮಕ್ಕಳೇ ಹೆಚ್ಚು ಮೇಲುಗೈ ಸಾಧಿಸುತ್ತಿದ್ದಾರೆ. ಅವರೂ ಎಲ್ಲಾ ರೀತಿಯಲ್ಲಿಯೂ ಸಮರ್ಥರಾಗಿದ್ದಾರೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.
ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ 'ಹಾಸನ ಜಿಲ್ಲಾ 108 ಆ್ಯಂಬುಲೆನ್ಸ್ ವಾಹನ ನೌಕರರ ಸಂಘ'ದ ವತಿಯಿಂದ ಆ್ಯಂಬುಲೆನ್ಸ್‌ಗಳಿಗೆ 'ಹೆಣ್ಣು ಮಕ್ಕಳನ್ನು ಉಳಿಸಿ, ಹೆಣ್ಣು ಮಕ್ಕಳನ್ನು ಬೆಳೆಸಿ' ಎಂಬ ಚಿತ್ರ ಫಲಕವನ್ನು ಅಂಟಿಸುವ ಮೂಲಕ ಪ್ರಚಾರಾಂದೋಲನ ಜಾಗೃತಿ ಕಾರ್ಯಕ್ಕೆ ಚಾಲನೆ ನೀಡಿದರು.
ಸಮಾಜ ಎಲ್ಲಾ ರೀತಿಯಲ್ಲಿಯೂ ಪ್ರಗತಿ ಹೊಂದುತ್ತಿದ್ದರೂ ಹೆಣ್ಣು ಮಕ್ಕಳ ಭ್ರೂಣ ಹತ್ಯೆ ನಿಲ್ಲುತ್ತಿಲ್ಲ. ಈಗಲೂ ಗಂಡು ಮಕ್ಕಳಿಗೆ ಹೆಚ್ಚು ಪ್ರಾಧಾನ್ಯತೆ ನೀಡಿ, ಹೆಣ್ಣಿಗೆ ಅವಕಾಶಗಳಿಂದ ವಂಚಿತರನ್ನಾಗಿ ಮಾಡಲಾಗುತ್ತಿದೆ. ಅವರಿಗೂ ಸಮಾನ ಅವಕಾಶಗಳು ದೊರೆಯುವಂತಾಗಬೇಕು ಎಂದರು.