ETV Bharat / state

ಅರಕಲಗೂಡು: ಜನಸಂಖ್ಯಾ ನಿಯಂತ್ರಣ ಜಾಗೃತಿ ವಾಹನಕ್ಕೆ ಚಾಲನೆ - Awareness Program Arakkalagudu

ವಿಶ್ವ ಜನಸಂಖ್ಯಾ ದಿನಾಚರಣೆ ಜುಲೈ 11 ರ ಪ್ರಯುಕ್ತ ಜಿಲ್ಲಾ ಆರೋಗ್ಯ ಮತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ವತಿಯಿಂದ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಶಾಸಕ ಎ.ಟಿ. ರಾಮಸ್ವಾಮಿ ಟ್ಯಾಬ್ಲೋ ಹಾಗೂ ಮೈಕಿಂಗ್ ಪ್ರಚಾರದ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮುಖಾಂತರ ಚಾಲನೆ ನೀಡಿದರು.

Arakkalgodu
ಜಾಗೃತಿ ಕಾರ್ಯಕ್ರಮ
author img

By

Published : Jul 13, 2020, 5:14 PM IST

ಅರಕಲಗೂಡು: ವಿಶ್ವ ಜನಸಂಖ್ಯಾ ದಿನಾಚರಣೆ ಜುಲೈ 11 ರ ಪ್ರಯುಕ್ತ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಇವರ ವತಿಯಿಂದ ಜನಸಂಖ್ಯಾ ನಿಯಂತ್ರಣ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.

ಶಾಸಕರಾದ ಎ.ಟಿ.ರಾಮಸ್ವಾಮಿಯವರು ಟ್ಯಾಬ್ಲೋ ಹಾಗೂ ಮೈಕಿಂಗ್ ಪ್ರಚಾರದ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮುಖಾಂತರ ಚಾಲನೆ ನೀಡಿದರು.

ಶಾಸಕ ಎ.ಟಿ. ರಾಮಸ್ವಾಮಿ ಟ್ಯಾಬ್ಲೋ ಹಾಗೂ ಮೈಕಿಂಗ್ ಪ್ರಚಾರದ ವಾಹನಕ್ಕೆ ಹಸಿರು ನಿಶಾನೆ ತೋರಿಸುವ ಮುಖಾಂತರ ಚಾಲನೆ ನೀಡಿದರು. ನಂತರ ಮಾತನಾಡಿದ ಅವರು, ಪ್ರಪಂಚದ ಜನಸಂಖ್ಯೆಯಲ್ಲಿ ಚೀನಾಗೆ ಮೊದಲನೇ ಸ್ಥಾನ, ಎರಡನೇ ಸ್ಥಾನ ಭಾರತಕ್ಕಿದೆ. ಆದರೆ ಚೀನಾ ಭೌಗೋಳಿಕ ವ್ಯಾಪ್ತಿ ನಮ್ಮ ದೇಶಕ್ಕಿಂತ ವಿಶಾಲವಾಗಿದ್ದು ನಮ್ಮ ದೇಶದ ಜನಸಂಖ್ಯೆ ನಿಯಂತ್ರಣ ಮಾಡುವ ಅನಿವಾರ್ಯತೆ ಜಾಸ್ತಿಯಿದೆ ಎಂದರು.

ಅದಕ್ಕಾಗಿ ಜನಸಂಖ್ಯಾ ಸ್ಥಿರತೆಯನ್ನು ಕಾಪಾಡಬೇಕಾಗಿದ್ದು, ಸರ್ಕಾರ ಕೆಲವು ಗುರಿಗಳನ್ನು ನಿಗದಿ ಮಾಡಿದೆ. ಮದುವೆಯ ವಯಸ್ಸನ್ನು ಜಾಸ್ತಿ ಮಾಡುವುದು, ಜನನಗಳ ನಡುವಿನ ಅಂತರವನ್ನು ಹೆಚ್ಚಿಸುವುದು, ಕುಟುಂಬ ಕಲ್ಯಾಣ ವಿಧಾನಗಳ ಬಳಕೆ ಮಾಡುವುದು, ಲಿಂಗ ಸಮಾನತೆ, ಹೆಣ್ಣು ಭ್ರೂಣ ಹತ್ಯೆಯ ನಿಷೇಧ, ಹೆಣ್ಣು ಮಕ್ಕಳಿಗೆ ಅಗತ್ಯ ಶಿಕ್ಷಣ, ಕುಟುಂಬ ಕಲ್ಯಾಣ ವಿಭಾಗದಲ್ಲಿ ಪುರುಷರ ಸಹಭಾಗಿತ್ವ ಹೀಗೆ ಇವುಗಳ ಸಮರ್ಪಕ ಅನುಷ್ಠಾನ ಮಾಡುವುದರಿಂದ ಜನಸಂಖ್ಯೆ ನಿಯಂತ್ರಿಸಿ ಹಾಗೂ ಸ್ಥಿರತೆಯನ್ನು ಕಾಪಾಡಬಹುದು ಎಂದರು.

ಜನಸಂಖ್ಯಾ ಸ್ಥಿರೀಕರಣ ಪಾಕ್ಷಿಕಾಚರಣೆಯು ಜುಲೈ 11 ರಿಂದ 24 ರವರೆಗೆ ನಡೆಯಲಿದ್ದು, ಈ ಸಂದರ್ಭದಲ್ಲಿ ಎಲ್ಲಾ ಕಡೆ ಈ ವಾಹನದ ಮೂಲಕ ಕುಟುಂಬ ಕಲ್ಯಾಣ ಯೋಜನೆಗಳ ಬಗ್ಗೆ, ಜನಸಂಖ್ಯಾ ನಿಯಂತ್ರಣದ ಬಗ್ಗೆ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಹಾಗೂ ತಾಲ್ಲೂಕಿನಾದ್ಯಂತ ಸಂಚರಿಸಿ ವ್ಯಾಪಕ ಪ್ರಚಾರ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಈ ಕಾರ್ಯಕ್ರಮದಲ್ಲಿ ಸಕಲೇಶಪುರ ಉಪವಿಭಾಗದ ಅಸಿಸ್ಟೆಂಟ್ ಕಮಿಷನರ್ ಗಿರೀಶ್ ನಂದನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಚಂದ್ರಶೇಖರ, ತಾಲ್ಲೂಕು ದಂಡಾಧಿಕಾರಿಗಳಾದ ವೈ.ಎಂ. ರೇಣುಕುಮಾರ, ಆರೋಗ್ಯ ಸಹಾಯಕರು ಮತ್ತು ಸಿಬ್ಬಂದಿ ಸೇರಿದಂತೆ ಮಾಧ್ಯಮ ಪ್ರತಿನಿಧಿಗಳು ಹಾಜರಿದ್ದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.