ETV Bharat / state

ಆಯುಷ್​ ಇಲಾಖೆಯಲ್ಲಿ ಗುತ್ತಿಗೆ ಆಧಾರದ ನೇಮಕಾತಿ: SSLC ಆದವರಿಗೂ ಅವಕಾಶ

author img

By

Published : Mar 21, 2023, 10:23 AM IST

ಹಾಸನ ಆಯುಷ್​ ಇಲಾಖೆಯಲ್ಲಿ ಗುತ್ತಿಗೆ ಆಧಾರದ ಮೇಲೆ ನೇರ ನೇಮಕಾತಿ ನಡೆಯಲಿದೆ.

Ayush Department Hassan invited application For Various post

ಹಾಸನದ ಕೇಂದ್ರ ಪುರಸ್ಕೃತ ಯೋಜನೆಯಡಿ ಮೇಲ್ದರ್ಜೆಗೇರಿಸಲಾದ ಆಸ್ಪತ್ರೆಗಳಿಗೆ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ತಜ್ಞ ವೈದ್ಯರು, ಅರೆ ವೈದ್ಯಕೀಯ ಸಿಬ್ಬಂದಿ ಮತ್ತು ಆಯುಷ್​ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಸಮುದಾಯ ಆರೋಗ್ಯ ಅಧಿಕಾರಿಗಳ ಹುದ್ದೆಗಳ ಭರ್ತಿಗೆ ನಿರ್ಧರಿಸಲಾಗಿದೆ. ಈ ಹುದ್ದೆಗಳಿಗೆ ಸಂಪೂರ್ಣವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ನಡೆಸಲಾಗುತ್ತಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

ಹುದ್ದೆಗಳ ವಿವರ: ಆಯುಷ್​ ಇಲಾಖೆಯಲ್ಲಿ ಕಾರ್ಯ ನಿರ್ವಹಿಸಲು ತಜ್ಞ ವೈದ್ಯರು (ಆಯುರ್ವೇದ), ತಜ್ಞ ವೈದ್ಯರು (ಯೋಗ ಮತ್ತು ಪ್ರಕೃತಿ ಚಿಕಿತ್ಸೆ) ಅಟೆಂಡೆಂಟ್​, ಸಮುದಾಯ ಆರೋಗ್ಯ ಅಧಿಕಾರಿ, ಔಷಧಿ ವಿತರಕರು, ಮಸಾಜಿಸ್ಟ್​​, ಸ್ತ್ರೀ ರೋಗ ಅಟೆಂಡೆಂಟ್​, ಮಲ್ಟಿ ಪರ್ಪಸ್​ ವರ್ಕರ್​ ಸೇರಿದಂತೆ ಒಟ್ಟು 18 ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.

ವಿದ್ಯಾರ್ಹತೆ: ಬಿಎಎಂಎಸ್​ ಪದವಿ, 10ನೇ ತರಗತಿ ಜೊತೆಗೆ ಸಂಬಂಧಿತ ಕ್ಷೇತ್ರದಲ್ಲಿ ವಿವಿಧ ಕೋರ್ಸ್​​ ಮತ್ತು ಅನುಭವ ಹೊಂದಿರಬೇಕು.

ವಯೋಮಿತಿ ಸಡಿಲಿಕೆ: ಕನಿಷ್ಟ 18 ವರ್ಷ ಪೂರೈಸಿದ್ದು, ಗರಿಷ್ಠ 35 ವರ್ಷ ವಯೋಮಿತಿ ಮೀರಿರಬಾರದು. ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ಪ್ರವರ್ಗ 1, 2ಎ, 2ಬಿ, 3ಎ ಮತ್ತು 3ಬಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆ ಇದೆ.

ಅಧಿಸೂಚನೆ
ಅಧಿಸೂಚನೆ

ವೇತನ: ಅಭ್ಯರ್ಥಿಗಳು ಹಾಸನದಲ್ಲಿ ಕಾರ್ಯ ನಿರ್ವಹಿಸಬೇಕಿದೆ. ವಿವಿಧ ಹುದ್ದೆಗಳ ಶ್ರೇಣಿಗೆ ಅನುಸಾರವಾಗಿ 10,300 ರಿಂದ 35,000 ರೂ.ವರೆಗೆ ವೇತನ ನಿಗದಿ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆಫ್‌ ಲೈನ್​ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಕೆಗೆ ಯಾವುದೇ ಅರ್ಜಿ ಶುಲ್ಕ ನಿಗದಿಸಿಲ್ಲ. ಅರ್ಜಿಗಳನ್ನು ಜಿಲ್ಲಾ ಆಯುಷ್​ ಇಲಾಖೆ ಮತ್ತು ಜಿಲ್ಲಾಧಿಕಾರಿಗಳ ಅಧಿಕೃತ ಜಾಲತಾಣದಲ್ಲಿ ಪಡೆಯಿರಿ. ನೀಡಲಾಗಿರುವ ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ, ಸಂಬಂಧಿತ ದಾಖಲೆ, ದೃಢೀಕರಣ ಪತ್ರಗಳನ್ನು ಸೇರಿಸಿ. ಈ ಕೆಳಗಿನ ವಿಳಾಸಕ್ಕೆ ಅಂತಿಮ ದಿನಕ್ಕೂ ಮೊದಲೇ ಅರ್ಜಿ ತಲುಪುವಂತೆ ಪೋಸ್ಟ್​ ಅಥವಾ ಖುದ್ದಾಗಿ ನೀಡಬಹುದು. ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ನೇಮಕಾತಿ ನಡೆಯಲಿದೆ.

ಅರ್ಜಿ ಸಲ್ಲಿಸುವ ವಿಳಾಸ: ಜಿಲ್ಲಾ ಆಯುಷ್​ ಅಧಿಕಾರಿಗಳ ಕಚೇರಿ, ಹೊಸಲೈನ್​ ರಸ್ತೆ, ಹಾಸನ- 573201

ಅರ್ಜಿ ಸಲ್ಲಿಸುವ ದಿನಾಂಕ: ಮಾರ್ಚ್​ 20ರಿಂದ ಅರ್ಜಿ ಸಲ್ಲಿಕೆ ಆರಂಭ. ಏಪ್ರಿಲ್​ 19 ಕಡೆಯ ದಿನ.

ಸಂಪೂರ್ಣ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆ ಸೇರಿದಂತೆ ಇನ್ನಿತರ ವಿವರಗಳನ್ನು ವೀಕ್ಷಿಸಲು ಈ hassan.nic.in ಜಾಲತಾಣಕ್ಕೆ ಭೇಟಿ ನೀಡಿ.

ಇದನ್ನೂ ಓದಿ: ತುಮುಲ್​ನಲ್ಲಿದೆ ಉದ್ಯೋಗಾವಕಾಶ! 219 ಹುದ್ದೆಗಳಿಗೆ ಅರ್ಜಿ ಆಹ್ವಾನ- ಕಂಪ್ಲೀಟ್‌ ಡಿಟೇಲ್ಸ್ ಇಲ್ಲಿದೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.