ETV Bharat / state

ಬಾವಿಯಲ್ಲಿ ಮಹಿಳೆಯ ಶವ ಪತ್ತೆ: ಮೂರು ವರ್ಷದ ಮಗು ನಾಪತ್ತೆ, ಪೋಷಕರ ಅನುಮಾನ

author img

By

Published : Feb 9, 2023, 8:10 AM IST

ಬಾವಿಯಲ್ಲಿ ಮಹಿಳೆಯ ಶವ ಪತ್ತೆ- ಮಗು ನಾಪತ್ತೆ - ಕೊಲೆ ಶಂಕೆ ವ್ಯಕ್ತಪಡಿಸಿದ ಪೋಷಕರು

Body of woman found in well
ಬಾವಿಯಲ್ಲಿ ಮಹಿಳೆಯ ಶವ ಪತ್ತೆ

ಗದಗ : ಮಹಿಳೆಯೊಬ್ಬಳು ಬಾವಿಯೊಂದರಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆಯಾಗಿರುವ ಘಟನೆ ಗದಗ ತಾಲೂಕಿನ ಕಳಸಾಪುರ ವ್ಯಾಪ್ತಿಯ ಸಾಸ್ವಿಹಳ್ಳಿ ಫಾರ್ಮ್​​​​ನಲ್ಲಿ ಬುಧವಾರ ನಡೆದಿದೆ. ರುಬಿನಾ ದಾವಲ್ ಸಾಬ್ ಕಣವಿ (27) ಮೃತ ಮಹಿಳೆ ಎಂದು ತಿಳಿದು ಬಂದಿದೆ. ಎಂದಿನಂತೆ ಮನೆಯಲ್ಲಿ ಎಲ್ಲರೂ ಕೆಲಸಕ್ಕೆ ಹೋಗಿದ್ದರು. ಅವರು ವಾಪಸ್​ ಬಂದಾಗ ಬಾವಿಯಲ್ಲಿ ರುಬಿನಾ ಶವವಾಗಿ ಪತ್ತೆಯಾಗಿದ್ದಾರೆ. ಈ ಮೃತ ಮಹಿಳೆಯ ಮೂರು ವರ್ಷದ ಮಗು ಜಾವೇದ್ ಕಣವಿ ಕೂಡ ಕಾಣೆಯಾಗಿದ್ದಾನೆ ಎನ್ನಲಾಗುತ್ತಿದ್ದು, ಆತನಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹುಡುಕಾಟ ನಡೆಸಿದೆ.

ರುಬಿನಾ ಮಗುವಿನೊಂದಿಗೆ ಆತ್ಮಹತ್ಯೆ ಮಾಡಿಕೊಂಡ ಬಗ್ಗೆ ಸ್ಥಳೀಯರು ಅನುಮಾನ ವ್ಯಕ್ತಪಡಿಸಿದ್ದಾರೆ. ಮೃತ ರುಬಿನಾ ಇದೇ ತೋಟದಲ್ಲಿ ಕೆಲಸಕ್ಕಿದ್ದರು. ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ತಮ್ಮ ಮಗಳನ್ನು ಕೊಲೆ ಮಾಡಲಾಗಿದೆ ಎಂದು ರುಬಿನಾ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಇನ್ನು, ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಬಂದ ಗದಗ ಗ್ರಾಮಾಂತರ ಠಾಣೆಯ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಸದ್ಯ ಮೃತದೇಹವನ್ನು ಇಲ್ಲಿಯ ಜಿಮ್ಸ್ ಆಸ್ಪತ್ರೆಯ ಶವಾಗಾರಕ್ಕೆ ರವಾನಿಸಲಾಗಿದೆ. ಗದಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು, ಈ ಕುರಿತು ಪ್ರಕರಣ ದಾಖಲಾಗಿದೆ.

ಮಂಗಳೂರು; ಫಾಜಿಲ್‌ ಸಹೋದರನ ಕಾರಿಗೆ ದ್ವಿಚಕ್ರ ವಾಹ‌ನ ಡಿಕ್ಕಿ: ಸುರತ್ಕಲ್​ನಲ್ಲಿ ಇತ್ತೀಚೆಗೆ ನಡೆದ ಸರಣಿ ಕೋಮು ಹತ್ಯೆಯಲ್ಲಿ ಹತನಾದ ಫಾಜಿಲ್​ನ ಸಹೋದರನ ಕಾರಿಗೆ ಅಪರಿಚಿತ ದ್ವಿಚಕ್ರ ವಾಹ‌ನ ಡಿಕ್ಕಿಯಾಗಿದೆ. ಇದೇ ಸಂದರ್ಭದಲ್ಲಿ ಮಾತಿನ ಚಕಮಕಿ ನಡೆದಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.

ಸುರತ್ಕಲ್ ಠಾಣಾ ವ್ಯಾಪ್ತಿಯ ಗಣೇಶ್​ಪುರ ಎಂಬಲ್ಲಿ ಬುಧವಾರ ರಾತ್ರಿ ಬೈಕ್ ಮತ್ತು ಕಾರ್ ನಡುವೆ ಲಘು ಅಪಘಾತ ಸಂಭವಿಸಿದ್ದು, ಕೆಲ ಕಾಲ ಘಟನಾ ಸ್ಥಳದಲ್ಲಿ ಉದ್ವಿಗ್ನ ವಾತಾವರಣ ಸೃಷ್ಟಿಯಾಗಿತ್ತು. ಇತ್ತೀಚೆಗೆ ಹತ್ಯೆಯಾಗಿದ್ದ ಫಾಜಿಲ್ ಸಹೋದರ ಸಂಚರಿಸುತ್ತಿದ್ದ ಕಾರು ಮತ್ತು ಬೈಕ್ ಪರಸ್ಪರ ಒರೆಸಿಕೊಂಡು ಹೋದಾಗ ಇತ್ತಂಡಗಳ ನಡುವೆ ಮಾತಿನ ಚಕಮಕಿ ಉಂಟಾಗಿತ್ತು. ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಬಂದ ಪೊಲೀಸರು ಮತ್ತು ಸಾರ್ವಜನಿಕರ ಮಧ್ಯ ಪ್ರವೇಶಿ ಪರಿಸ್ಥಿತಿ ತಿಳಿಯಾಗಿಸಿದ್ಧಾರೆ ಎಂದು ತಿಳಿದು ಬಂದಿದೆ. ಇದೇ ವೇಳೆ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿರುವ ಮಂಗಳೂರು ‌ನಗರ ಪೊಲೀಸ್ ಕಮೀಷನರ್ ಶಶಿಕುಮಾರ್ ಅವರು ಗಣೇಶಪುರ ಜಂಕ್ಷನ್‌ನಲ್ಲಿ ದ್ವಿಚಕ್ರ ವಾಹನ ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿದೆ. ಇದರ ನಂತರ ಮಾತಿನ ಚಕಮಕಿ ನಡೆಯಿತು. ತಕ್ಷಣ ಸಾರ್ವಜನಿಕರು ಮತ್ತು ಪೊಲೀಸರು ಮಧ್ಯ ಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು. ಎರಡೂ ಕಡೆಯವರು ದೂರು ನೀಡಲು ಬಯಸಿರುವುದಾಗಿ ಹೇಳಿದ್ದಾರೆ. ಈ ಕುರಿತು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂಓದಿ : ಹೊಸಕೋಟೆ: ಗಂಡನ ತ್ಯಜಿಸಿದ್ದ ಮಹಿಳೆ ಪ್ರಿಯಕರನೊಂದಿಗೆ ಆತ್ಮಹತ್ಯೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.