ಹಾಸನ: ಬಾಲ್ಯ ವಿವಾಹ-ಮಹಿಳೆಯರ ಮತ್ತು ಮಕ್ಕಳ ಕಳ್ಳ ಸಾಗಾಣಿಕೆಯನ್ನು ತಡೆಗಟ್ಟಿದರೆ ಮಾತ್ರ ಸುಭದ್ರ ಸಮಾಜ ನಿರ್ಮಿಸಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ಅಭಿಪ್ರಾಯಪಟ್ಟರು.
ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಏರ್ಪಡಿಸಲಾಗಿದ್ದ ಬಾಲ್ಯವಿವಾಹ ನಿಷೇಧ ಹಾಗೂ ಮಹಿಳೆಯರ ಮತ್ತು ಮಕ್ಕಳ ಸಾಗಾಣಿಕೆ ತಡೆಗಟ್ಟುವಿಕೆ ಕುರಿತು ವಿಭಾಗೀಯ ಮಟ್ಟದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಹೆಣ್ಣಿಗೆ 12 ಇಲ್ಲವೇ 15 ವರ್ಷಕ್ಕೆ ಈ ಹಿಂದೆ ಮದುವೆಯಾಗುತ್ತಿತ್ತು. ಈಗಲೂ ಅಲ್ಲಲ್ಲಿ ಇಂತಹ ಪ್ರಕರಣಗಳು ಕಂಡು ಬರುತ್ತಿವೆ. ಇದು ನಮ್ಮ ಸಮಾಜದಲ್ಲಿದ್ದ ಅನರಕ್ಷತೆ, ಅಜ್ಞಾನದಿಂದ ಬಾಲ್ಯ ವಿವಾಹ ವ್ಯವಸ್ಥೆಗೆ ಕಾರಣವಾಗಿರಬಹುದು ಎಂದರು.
ಈ ಬಗ್ಗೆ ಅಧಿಕಾರಿಗಳು ಎಚ್ಚರಿಕೆ ವಹಿಸಿ, ತಿಳುವಳಿಕೆ ಮಾತನ್ನು ಹೇಳಿ ಬಾಲ್ಯ ವಿವಾಹ ನಡೆಯದಂತೆ ಮನವರಿಕೆ ಮಾಡುವ ಕೆಲಸ ಮಾಡಬೇಕು ಎಂದು ಸೂಚಿಸಿದರು.