ETV Bharat / state

ಆಕಸ್ಮಿಕ ಬೆಂಕಿ: ಸಕಲೇಶಪುರ ಬಳಿ ಹೊತ್ತಿ ಉರಿದ ಎಣ್ಣೆ ಕ್ಯಾಂಟರ್​ - Hassan news

ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಕ್ಯಾಂಟರ್​ವೊಂದು ಬೆಂಕಿಗಾಹುತಿಯಾಗಿದ್ದು, ಚಾಲಕ ಅಪಾಯದಿಂದ ಪಾರಾಗಿದ್ದಾನೆ.

Canter catches fire in Hassan
ಹೊತ್ತಿ ಉರಿದ ಎಣ್ಣೆ ಕ್ಯಾಂಟರ್​
author img

By

Published : Aug 21, 2021, 7:10 AM IST

ಹಾಸನ: ಆಕಸ್ಮಿಕ ಬೆಂಕಿ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಖಾಸಗಿ ಕ್ಯಾಂಟರ್​ವೊಂದು ಬೆಂಕಿಗಾಹುತಿಯಾಗಿರುವ ಘಟನೆ ಜಿಲ್ಲೆಯ ಸಕಲೇಶಪುರ ಸಮೀಪ ನಡೆದಿದೆ.

ಹೊತ್ತಿ ಉರಿದ ಎಣ್ಣೆ ಕ್ಯಾಂಟರ್​

ಮಂಗಳೂರಿನಿಂದ ಬೆಂಗಳೂರಿಗೆ ಅಡುಗೆ ಎಣ್ಣೆ ಸಾಗಿಸುತ್ತಿದ್ದ ಕ್ಯಾಂಟರ್​, ಸಕಲೇಶಪುರ ತಾಲೂಕಿನ ದೋಣಿಗಲ್ ಬಳಿ ತಾಂತ್ರಿಕ ದೋಷದಿಂದ ಎಂಜಿನ್​​ನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ತಕ್ಷಣವೇ ಚಾಲಕ ಗಾಡಿಯನ್ನು ರಸ್ತೆಬದಿಯಲ್ಲೇ ನಿಲ್ಲಿಸಿ ಕೆಳಕ್ಕೆ ಜಿಗಿದು ಪ್ರಾಣ ಉಳಿಸಿಕೊಂಡಿದ್ದಾರೆ.

ಇದನ್ನೂ ಓದಿ: ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ತಾನು ಮದುವೆಯಾಗಬೇಕಿದ್ದ ಯುವತಿಯ ಕೊಲ್ಲಲು ಯತ್ನ!

ಸಕಲೇಶಪುರಕ್ಕೆ ಕೂಗಳತೆಯ ದೂರದಲ್ಲಿ ಘಟನೆ ನಡೆದಿದ್ದು, ಸ್ಥಳೀಯರು ಹಾಗೂ ಇತರ ವಾಹನಗಳ ಪ್ರಯಾಣಿಕರು ಬೆಂಕಿ ನಂದಿಸಲು ಹರಸಾಹಸ ಪಟ್ಟಿದ್ದಾರೆ. ಅಗ್ನಿಶಾಮಕದಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸುವ ವೇಳೆಗೆ ಕ್ಯಾಂಟರ್​ ಸುಟ್ಟು ಕರಕಲಾಗಿದೆ. ಈ ಸಂಬಂಧ ಸಕಲೇಶಪುರ ನಗರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.