ETV Bharat / state

ಬೈಕ್​ಗೆ ಕಾರು ಡಿಕ್ಕಿ: ತಂದೆ-ಮಗನಿಗೆ ಗಂಭೀರ ಗಾಯ - ತಂದೆ ಮಗನಿಗೆ ಗಂಭೀರ ಗಾಯ

ಹಾಸನದಿಂದ ಚನ್ನರಾಯಪಟ್ಟಣ ಕಡೆಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಮತ್ತು ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ಇಬ್ಬರಿಗೆ ಗಂಭೀರ ಗಾಯಗಳಾಗಿವೆ.

car and bike accident near hassan father and his son injured
ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಡಿಕ್ಕಿ ಹೊಡೆದ ಕಾರು-ತಂದೆ ಮಗನಿಗೆ ಗಂಭೀರ ಗಾಯ
author img

By

Published : Apr 4, 2020, 10:11 PM IST

ಹಾಸನ: ದ್ವಿಚಕ್ರ ವಾಹನಕ್ಕೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಚನ್ನರಾಯಪಟ್ಟಣದ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ನಡೆದಿದೆ.

ಕೃಷ್ಣೇಗೌಡ (45) ಮತ್ತು ಆತನ ಮಗ ಕುಮಾರ್ (20) ಗಂಭೀರವಾಗಿ ಗಾಯಗೊಂಡ ದ್ವಿಚಕ್ರವಾಹನ ಸವಾರರು. ಕಾರು ಚಾಲಕನ ನಿರ್ಲಕ್ಷ್ಯ, ಅಜಾಗರೂಕತೆ ಮತ್ತು ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ರಾಷ್ಟ್ರೀಯ ಹೆದ್ದಾರಿ 75ರ ಬರಗೂರು-ಉದಯಪುರ ನಡುವಿನ ಕತ್ತರಿಘಟ್ಟ ಗೇಟ್ ಸಮೀಪ ಅಪಘಾತ ಸಂಭವಿಸಿದೆ.

ಹಾಸನದಿಂದ ಚನ್ನರಾಯಪಟ್ಟಣ ಕಡೆಗೆ ಹೊರಟಿದ್ದ ದ್ವಿಚಕ್ರ ವಾಹನಕ್ಕೆ ಹಿಂಬದಿಯಿಂದ ಬಂದ ಕಾರು ರಭಸವಾಗಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಮತ್ತು ಕಾರು ರಸ್ತೆ ಪಕ್ಕದ ಗುಂಡಿಗೆ ಬಿದ್ದಿದ್ದು, ಚಾಲಕನಿಗೂ ಗಂಭೀರವಾಗಿ ಗಾಯವಾಗಿದೆ.

ತಾಲೂಕಿನ ಚೋಳೇನಹಳ್ಳಿಯ ಕಾಂಗ್ರೇಸ್ ಮುಖಂಡ ಸುರೇಶ್ ಎಂಬುವರಿಗೆ ಸೇರಿದ್ದ ಕಾರು ಎಂದು ತಿಳಿದುಬಂದಿದೆ. ಚನ್ನರಾಯಪಟ್ಟಣ ಪೊಲೀಸರು ಸ್ಥಳಪರಿಶೀಲನೆ ನಡೆಸಿ ವಾಹನಗಳನ್ನ ವಶಕ್ಕೆ ಪಡೆದು ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.