ಹಾಸನ: ಕೊರೊನಾ ಎರಡನೇ ಅಲೆ ಪ್ರಾರಂಭವಾದ ಬಳಿಕ ಜಿಲ್ಲೆಯಲ್ಲಿ ಮಾಸ್ಕ್ ಧರಿಸದ 11,584 ಜನರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇದರ ಜೊತೆಗೆ ದಾಖಲೆ, ಹೆಲ್ಮೆಟ್ ಇಲ್ಲದ ಹಾಗು ಪತ್ರಕರ್ತರೆಂದು ನಕಲಿ ಬೋರ್ಡ್ ಅಳವಡಿಸಿಕೊಂಡು ಓಡಾಡುತ್ತಿದ್ದ 6 ಸಾವಿರ ದ್ವಿಚಕ್ರ ವಾಹನಗಳನ್ನು ಜಪ್ತಿ ಮಾಡಲಾಗಿದೆ. ಈ ಬಗ್ಗೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀನಿವಾಸಗೌಡ ಮಾಹಿತಿ ನೀಡಿದರು.
ವಿವಿಧ ಪ್ರಕರಣಗಳ ಅಡಿ ಒಟ್ಟು 357 ಜನರ ವಿರುದ್ಧ ಎಫ್ಐಆರ್ ದಾಖಲಿಸಿದ್ದೇವೆ. ಜಿಲ್ಲೆಯಲ್ಲಿ ಜೂನ್ 14ರ ತನಕ ಲಾಕ್ಡೌನ್ ಮುಂದುವರೆಯಲಿದ್ದು, ಪೊಲೀಸರು ಕಾರ್ಯಾಚರಣೆ ಮುಂದುವರೆಸಲಿದ್ದಾರೆ. ಜಿಲ್ಲೆಯಾದ್ಯಂತ ಬ್ಯಾರಿಕೇಡ್ ಹಾಕಿ ಸರ್ಕಾರದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುತ್ತಿದೆ. ಹೀಗಾಗಿ, ಸಾರ್ವಜನಿಕರು ಸುಖಾಸುಮ್ಮನೆ ಓಡಾಡಬಾರದು. ವ್ಯಾಕ್ಸಿನೇಷನ್ ಹಾಗು ಮೆಡಿಕಲ್ ಎಮರ್ಜೆನ್ಸಿ ಇದ್ದರೆ ಮಾತ್ರ ಹೊರಬನ್ನಿ ಎಂದು ಎಸ್ಪಿ ಮನವಿ ಮಾಡಿದರು.
ಇದನ್ನೂ ಓದಿ: ಹಿಂದೂ ದೇವಾಲಯಗಳ ಹಣ ಅನ್ಯಧರ್ಮೀಯ ಸಂಸ್ಥೆಗಳಿಗೆ ನೀಡುವುದಿಲ್ಲ: ಸಚಿವ ಕೋಟ ಶ್ರೀನಿವಾಸ್ ಪೂಜಾರಿ