ETV Bharat / state

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು: ಪ್ರಧಾನಿಗೆ ಶಾಸಕ ಪ್ರೀತಂ ಗೌಡ ಧನ್ಯವಾದ - ಅರ್ಟಿಕಲ್​ 370

ಜಮ್ಮು-ಕಾಶ್ಮೀರದ ವಿಶೇಷ ಸ್ಥಾನಮಾನ ರದ್ದು ಮಾಡಿರುವುದನ್ನು ಹಾಸನ ಶಾಸಕ ಪ್ರೀತಂ ಗೌಡ ಸ್ವಾಗತಿಸಿದ್ದಾರೆ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ನುಡಿದಂತೆ ನಡೆದುಕೊಂಡಿದೆ ಎಂದರು.

Celebration across Hassan District
author img

By

Published : Aug 6, 2019, 9:34 PM IST

ಹಾಸನ: ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರ ನಿರ್ಧಾರವನ್ನು ಶಾಸಕ ಪ್ರೀತಂ ಗೌಡ ಸ್ವಾಗತಿಸಿದ್ದಾರೆ.

ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮ್ಮು-ಕಾಶ್ಮೀರವನ್ನು ದೇಶದ ಅವಿಭಾಜ್ಯ ಅಂಗವೆಂದು ಘೋಷಿಸಿರುವುದು ಭಾರತೀಯರಲ್ಲಿ ಸಂತಸ ತಂದಿದೆ ಎಂದರು.

ಕೇಂದ್ರದ ನಿರ್ಧಾರ ಸ್ವಾಗತಿಸಿದ ಹಾಸನ ಬಿಜೆಪಿ ಶಾಸಕ

ದೇಶದ ತೆರಿಗೆ ಹಣ ಜಮ್ಮು, ಕಾಶ್ಮೀರದ ಅಭಿವೃದ್ಧಿಗೂ ಬಳಕೆಯಾಗಲಿದೆ. ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ಭರವಸೆಯನ್ನು ಈಡೇರಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‌ ಶಾ ನೇತೃತ್ವದ ಸರ್ಕಾರ ದೃಢ ತೀರ್ಮಾನ ಕೈಗೊಂಡು ನುಡಿದಂತೆ ನಡೆದುಕೊಂಡಿದೆ ಎಂದು ಅಭಿನಂದನೆ ಸಲ್ಲಿಸಿದರು.

ಇನ್ನು ಜಿಲ್ಲಾ ಬಿಜೆಪಿ ವತಿಯಿಂದ ಸಂಭ್ರಮಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಗಿತ್ತಾದರೂ, ಮಳೆಯ ಅಡ್ಡಿಯಿಂದಾಗಿ ಕಾರ್ಯಕ್ರಮ ರದ್ದುಪಡಿಸಲಾಯಿತು ಎಂದು ಶಾಸಕ ತಿಳಿಸಿದರು.

Intro:ಹಾಸನ : ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ ೩೭೦ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರಸರಕಾರದ ನಿರ್ಧಾರವನ್ನು ಸ್ವಾಗತಿಸಿ ಜಿಲ್ಲೆಯಲ್ಲಿ ಸಂಭ್ರಮಾಚರಣೆ ಮಾಡಲಾಯಿತು.
Body:ಹಾಸನ ಕ್ಷೇತ್ರದ ಬಿಜೆಪಿ ಶಾಸಕ ಪ್ರೀತಂಜೆ ಗೌಡ ಸುದ್ದಿಗಾರರೊಂದಿಗೆ ಮಾತನಾಡಿ, ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ಒದಗಿಸುವ ೩೭೦ನೇ ವಿಧಿಯನ್ನು ರದ್ದುಗೊಳಿಸಿ, ಜಮ್ಮು, ಕಾಶ್ಮೀರ ದೇಶವ ಅವಿಭಾಜ್ಯ ಅಂಗ ಎಂದು ಘೋಷಿಸಿರುವುದು ಭಾರತೀಯರಲ್ಲಿ ಹರ್ಷ ತಂದ ಶುಭಸುದ್ದಿ ಎಂದರು.
Conclusion:ದೇಶದ ತೆರಿಗೆ ಹಣ ಜಮ್ಮು, ಕಾಶ್ಮೀರದ ಅಭಿವೃದ್ಧಿಗೂ ಬಳಕೆಯಾಗಲಿದೆ. ಬಿಜೆಪಿ ಅಧಿಕಾರಕ್ಕೆ ಬರುವ ಮುನ್ನ ನೀಡಿದ್ದ ವಚನವನ್ನು ಈಡೇರಿಸುವ ಮೂಲಕ ಪ್ರಧಾನಿ ನರೇಂದ್ರಮೋದಿ, ಗೃಹ ಸಚಿವ ಅಮಿತ್‌ಶಾ ನೇತೃತ್ವದ ಸರಕಾರ ದೃಢ ತೀರ್ಮಾನ ಕೈಗೊಂಡು ನುಡಿದಂತೆ ನಡೆದುಕೊಂಡಿದೆ ಎಂದು ಅಭಿನಂದಿಸಿದರು.
ಜಿಲ್ಲಾ ಬಿಜೆಪಿವತಿಯಿಂದ ಸಂಭ್ರಮಾಚರಣೆ ಆಚರಿಸಬೇಕು ಎಂದು ನಿರ್ಧರಿಸಲಾಗಿತ್ತಾದರೂ, ಮಳೆಯ ಅಡ್ಡಿಯ ಕಾರಣ ಪಟಾಕಿ ಸಿಡಿಸಿ, ಸಿಹಿ ವಿತರಿಸುವ ಕಾರ್ಯಕ್ರಮ ರದ್ದುಪಡಿಸಲಾಯಿತು.
ಚನ್ನರಾಯಪಟ್ಟಣದಲ್ಲಿ ಯುವಬ್ರಿಗೇಡ್ ವತಿಯಿಂದ ಕೆ.ಆರ್.ವೃತ್ತದಲ್ಲಿ ಸಂಭ್ರಮಾಚರಣೆ ಮಾಡಲಾಯಿತು. ಹೊಳೆನರಸೀಪುರದಲ್ಲಿ ಬಿಜೆಪಿ ಮುಖಂಡರು, ಕಾರ್ಯಕರ್ತರು ಸಂಭ್ರಮಾಚರಣೆ ಮಾಡಿದರು.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
ETV Bharat Logo

Copyright © 2025 Ushodaya Enterprises Pvt. Ltd., All Rights Reserved.