ಹಾಸನ: ಶಿಕ್ಷಣದ ಜೊತೆ ನಾಯಕತ್ವದ ಗುಣ ಬೆಳೆಸಿಕೊಳ್ಳುವುದರಿಂದ ಸಮಾಜದಲ್ಲಿನ ಸಮಸ್ಯೆಗಳನ್ನು ನಿವಾರಿಸಲು ಸಾಧ್ಯವಾಗುತ್ತದೆ ಎಂದು ಪ್ರಧಾನ ನ್ಯಾಯಾಧೀಶ ಶಿವಣ್ಣ ಮಕ್ಕಳ ಸಂಸತ್ ಕಾರ್ಯಕ್ರಮದಲ್ಲಿ ಅಭಿಪ್ರಾಯಪಟ್ಟಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಹೊಯ್ಸಳ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಮಕ್ಕಳ ಸಂಸತ್ತು ಕಾರ್ಯಕ್ರಮವನ್ನು ವಿಭಿನ್ನ ರೀತಿ ಉದ್ಘಾಟಿಸಿ ಮಾತನಾಡಿದ ಅವರು, ಇಲ್ಲಿ ಕುಳಿತಿರುವ ಮಕ್ಕಳನ್ನು ನೋಡಿದರೇ ಮುಂದಿನ ನಾಯಕರು ಎನಿಸುತಿದೆ. ಮಕ್ಕಳು ಶಿಕ್ಷಣದ ಜೊತೆ ಜೊತೆಯಲ್ಲಿ ನಾಯಕತ್ವದ ಗುಣಗಳನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು.
ಒಬ್ಬ ಉತ್ತಮ ನಾಯಕನಾಗಿ ಬೆಳೆಯಬೇಕಾದರೇ ಕಷ್ಟ-ಸುಖ ಎರಡನ್ನು ಸಮನಾಗಿ ಸ್ವೀಕರಿಸಿದರೇ ಜವಾಬ್ದಾರಿ ಹೆಚ್ಚು ಬರುತ್ತದೆ. ಯಾವುದೇ ಸಂದರ್ಭದಲ್ಲಿ ಸಮಸ್ಯೆ ಬಂದಾಗ ಸೋಲು ಬಂದರೇ ಕೈಚೆಲ್ಲದೇ ಮತ್ತೆ ಮತ್ತೆ ಪ್ರಯತ್ನ ಮಾಡಿದರೇ ಮಾತ್ರ ನಿಜವಾದ ವ್ಯಕ್ತಿತ್ವ ಸಾಧನೆಯಾಗುತ್ತದೆ ಎಂದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಮ್ ನಿವಾಸ್‌ಸೆಪಟ್ ಮಾತನಾಡಿ, ಶಾಲಾ ಹಂತದಲ್ಲಿಯೇ ನಾಯಕತ್ವದ ಗುಣ ಬೆಳೆಸಿಕೊಂಡರೇ ಮುಂದೆ ಸದೃಢವಾಗಿ ಇರಬಹುದು ಎಂದು ತಿಳಿಸಿದರು.