ETV Bharat / state

ರೈತರ ಮೇಲೆ ಲಾಠಿ ಚಾರ್ಜ್ ವಿರೋಧಿಸಿ ಸಿಐಟಿಯು ಪ್ರತಿಭಟನೆ - ಹಾಸನ ಸಿಐಟಿಯು ಪ್ರತಿಭಟನೆ 2020

ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ಕಾನೂನು ಮತ್ತು ಹರಿಯಾಣದಲ್ಲಿ ರೈತರ ಮೇಲೆ ನಡೆಸಿದ ಲಾಠಿ ಚಾರ್ಚ್ ಖಂಡಿಸಿ ಹಾಸನದಲ್ಲಿ ಸಿಐಟಿಯು ಪ್ರತಿಭಟನೆ ನಡೆಸಿದೆ.

ಹಾಸನದಲ್ಲಿ ಸಿಐಟಿಯು ಪ್ರತಿಭಟನೆ
ಹಾಸನದಲ್ಲಿ ಸಿಐಟಿಯು ಪ್ರತಿಭಟನೆ
author img

By

Published : Nov 27, 2020, 7:15 PM IST

ಹಾಸನ: ಹರಿಯಾಣದಲ್ಲಿ ರೈತರ ಮೇಲೆ ನಡೆದ ಲಾಠಿ ಚಾರ್ಜ್ ಹಾಗೂ ಕೇಂದ್ರ, ರಾಜ್ಯ ಸರ್ಕಾರದ ರೈತ ವಿರೋಧಿ ಕಾನೂನು ವಿರೋಧಿಸಿ ಸಿಐಟಿಯು ನೇತೃತ್ವದಲ್ಲಿ ರಾಜ್ಯ ರೈತ ಸಂಘ ಹಾಗೂ ಇತರೆ ಸಂಘಟನೆಗಳು ಪ್ರತಿಭಟನೆ ನಡೆಸಿದವು. ಈ ಸಂದರ್ಭದಲ್ಲಿ ನಗರದ ಮುಖ್ಯ ಅಂಚೆ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಅಖಿಲ ಭಾರತ ಮುಷ್ಕರದ ಭಾಗವಾಗಿ ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಜಿಲ್ಲಾ ಮುಖ್ಯ ಅಂಚೆ ಕಚೇರಿವರೆಗೆ ಮೆರವಣಿಗೆ ನಡೆಯಿತು. ಈ ವೇಳೆ ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಅಂಚೆ ಕಚೇರಿ ಒಳಗೆ ಬಿಡದ ಕಾರಣ ಪ್ರತಿಭಟನಾಕಾರರು ರಸ್ತೆ ಮಧ್ಯೆ ಕುಳಿತು ವಾಹನ ಓಡಾಟಕ್ಕೆ ಅಡಚಣೆ ಉಂಟುಮಾಡಿದರು. ವಿಷಯ ಮನಗಂಡ ಪೊಲೀಸರು ಮುನ್ನೆಚ್ಚರಿಕೆ ಕ್ರಮವಾಗಿ ಪ್ರತಿಭಟನಾನಿರತರನ್ನು ಬಂಧಿಸಿ ಜಿಲ್ಲಾ ಸಶಸ್ತ್ರ ಮೀಸಲು ಮೈದಾನಕ್ಕೆ ಕರೆದೊಯ್ದರು.

ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಸಿಐಟಿಯು ಜಿಲ್ಲಾ ಕಾರ್ಯದದರ್ಶಿ ಹೆಚ್.ಆರ್.ನವೀನ್ ಕುಮಾರ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತಂದು ರೈತರ ಜಮೀನು ಕಿತ್ತುಕೊಳ್ಳಲು ಯತ್ನಿಸುತ್ತಿವೆ. ಇನ್ನು ಜಮೀನುಗಳನ್ನು ಕಾರ್ಪೊರೇಟ್ ಕಂಪನಿಗಳಿಗೆ ನೀಡುತ್ತಿವೆ. ಈ ತಿದ್ದುಪಡಿ ಕಾಯ್ದೆಯಿಂದ ರೈತರು ಬೀದಿಪಾಲಾಗಲಿದ್ದಾರೆ ಎಂದರು.

ಎಲ್ಲಾ ರೈತ ವಿರೋಧಿ ಮಸೂದೆಗಳನ್ನು ಹಿಂಪಡೆಯಬೇಕು. ಎಲ್ಲಾ ಸಂಸದೀಯ ಮತ್ತು ಸಂವಿಧಾನಿಕ ಕಾರ್ಯ ವಿಧಾನಗಳನ್ನು ಉಲ್ಲಂಘನೆ ಮಾಡಿ ಶೇ. 70ರಷ್ಟು ಗ್ರಾಮೀಣ ಜನತೆ ಅವಲಂಬಿಸಿದ್ದ ಕೃಷಿಯನ್ನು ಕಾರ್ಪೋರೇಟ್ ಕಂಪನಿಗಳ ಪರವಾಗಿ ಮಾಡುವ ಉದ್ದೇಶದಿಂದ ತಿದ್ದುಪಡಿ ತಂದು ಅದಕ್ಕೆ ಸಹಿ ಹಾಕಲಾಗಿದೆ. ಹಾಗೆಯೇ ರಾಜ್ಯದಲ್ಲಿಯೂ ಕೂಡ ಭೂ ಸ್ವಾಧೀನ ಕಾಯ್ದೆಗಳಿಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಿದೆ ಎಂದು ಆತಂಕ ವ್ಯಕ್ತಪಡಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.