ETV Bharat / state

ಕೋವಿಡ್ ತಡೆಯಲು ಸಿಎಂ 18ರ ಯುವಕನಂತೆ ಕೆಲಸ ಮಾಡ್ತಿದ್ದಾರೆ: ಎಸ್.‌ಟಿ.ಸೋಮಶೇಖರ್ - ಹಾಸನ

ಕೊರೊನಾ ವೈರಸ್‌ ಸೋಂಕು ಹರಡುವುದನ್ನು ತಡೆಗಟ್ಟಲು ಸಿಎಂ ಯಡಿಯೂರಪ್ಪ ದಿನದ 24 ಗಂಟೆಗಳ ಕಾಲವೂ ಚುರುಕಾಗಿ ರಾಜ್ಯದ ಎಲ್ಲಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದಾರೆ ಎಂದು ಸಚಿವ ಎಸ್‌.ಟಿ.ಸೋಮಶೇಖರ್‌ ತಿಳಿಸಿದ್ದಾರೆ.

cm-bsy-working-like-18-year-old-boy-minister-s-t-somashekar
ಕೋವಿಡ್‌19 ತಡೆಗಟ್ಟಲು ಸಿಎಂ 18ರ ಯುವಕನಂತೆ ಕೆಲಸ: ಸಚಿವ ಎಸ್‌ಟಿ ಸೋಮಶೇಖರ್
author img

By

Published : Jun 9, 2020, 12:49 PM IST

ಹಾಸನ: ಕೋವಿಡ್‌ನಂತಹ ಕಠಿಣ ಪರಿಸ್ಥಿತಿಯಲ್ಲಿಯೂ 18 ವರ್ಷದ ಯುವಕನಂತೆ ಸಿಎಂ ಯಡಿಯೂರಪ್ಪ ಕಾರ್ಯ ನಿರ್ವಹಿಸುತ್ತಿದ್ದಾರೆ. ದಿನದ 24 ಗಂಟೆಗಳ ಕಾಲವೂ ಚುರುಕಾಗಿ ರಾಜ್ಯದ ಎಲ್ಲಾ ಸ್ಥಿತಿಗತಿಗಳ ಬಗ್ಗೆ ಮಾಹಿತಿ ಕಲೆ ಹಾಕುವ ಅವರು, ಕೊರೊನಾ ಸೋಂಕು ತಡೆಗಟ್ಟುವ ಕಾರ್ಯದಲ್ಲಿ ಸಕ್ರಿಯರಾಗಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಹೊಗಳಿದರು.

ಕೋವಿಡ್‌19 ತಡೆಗಟ್ಟಲು ಸಿಎಂ 18ರ ಯುವಕನಂತೆ ಕೆಲಸ: ಸಚಿವ ಎಸ್‌ಟಿ ಸೋಮಶೇಖರ್

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿ ಸಚಿವರು, ಸಿಎಂ ಮಾತು ಕೊಟ್ಟಂತೆ ಎಲ್ಲರಿಗೂ ಮಂತ್ರಿಸ್ಥಾನ ನೀಡಿದ್ದಾರೆ. ಮುನಿರತ್ನಂ ಹಾಗೂ ಪ್ರತಾಪ್‌ಗೌಡ ಪಾಟೀಲ್ ವಿಚಾರವಾಗಿ ನ್ಯಾಯಾಲಯದಲ್ಲಿ ತೀರ್ಪು ಬಾಕಿ ಇದೆ. ಅದೇ ರೀತಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ಸಹಕರಿಸಿದ ಎಂ.ಟಿ.ಬಿ.ನಾಗರಾಜ್, ಎಚ್.ವಿಶ್ವನಾಥ್ ಹಾಗೂ ಶಂಕರ್ ಅವರಿಗೆ ಮಂತ್ರಿ ಸ್ಥಾನ ನೀಡಬೇಕೆಂದು ಎಲ್ಲಾ ಬಿಜೆಪಿ ಮುಖಂಡರ ಬಯಕೆಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ಸುಮಾರು 40 ಸಾವಿರಕ್ಕೂ ಅಧಿಕ ಆಶಾ ಕಾರ್ಯಕರ್ತರಿಗೆ 3 ಸಾವಿರ ರೂ.ಗಳ ಪ್ರೋತ್ಸಾಹ ಧನ ನೀಡಲಾಗುವುದು. ಆಶಾ ಕಾರ್ಯಕರ್ತರಿಗೆ ಪ್ರೋತ್ಸಾಹ ಧನ ನೀಡುವ ಕಾರ್ಯಕ್ರಮವನ್ನು ಹಾಸನ ಜಿಲ್ಲೆಯಿಂದ ಪ್ರಾರಂಭಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಿಗೂ ಅಲ್ಲಿನ ಉಸ್ತುವಾರಿ ಸಚಿವರು ಹಾಗೂ ಶಾಸಕರ ಮಾರ್ಗದರ್ಶನದಲ್ಲಿ ಪ್ರೋತ್ಸಾಹಧನ ನೀಡುವ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಸಹಕಾರ ಇಲಾಖೆ ಕೆಲವು ತಿದ್ದುಪಡಿಗಳನ್ನು ಜಾರಿಗೊಳಿಸಲು ಸಾಧ್ಯವಾಗದ ಕಾರಣ ಮುಂದಿನ ದಿನಗಳಲ್ಲಿ ಮೂರ್ನಾಲ್ಕು ಸಭೆಗಳನ್ನು ನಡೆಸಿ ನಂತರ ಸಹಕಾರ ಇಲಾಖೆಯಲ್ಲಿನ ತಿದ್ದುಪಡಿ ಬಗ್ಗೆ ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.