ಹಾಸನ: ರಾಜ್ಯದಲ್ಲಿ ಬುಡಕಟ್ಟು ಜನಾಂಗದ ಸುಮಾರು 45 ಲಕ್ಷ ಜನರಿದ್ದಾರೆ. ಜನಸಂಖ್ಯೆಗೆ ಅನುಗುಣವಾಗಿ ವಾಲ್ಮೀಕಿ ಜನಾಂಗಕ್ಕೆ ಶೇ3 ರಿಂದ 7ಕ್ಕೆ ಮೀಸಲು ಪ್ರಮಾಣ ಹೆಚ್ಚಿಸುವಂತೆ ಹಾಸನ ಜಿಲ್ಲಾ ವಾಲ್ಮೀಕಿ ನಾಯಕ ಸಂಘದ ಗೌರವಾಧ್ಯಕ್ಷ ಚಲುವನಹಳ್ಳಿ ಶೇಖರಪ್ಪ ಒತ್ತಾಯಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು ಮುಂದಿನ ಫೆಬ್ರವರಿ 8 ಮತ್ತು 9 ರಂದು ರಾಜನಹಳ್ಳಿ ಮಠದಲ್ಲಿ ನಡೆಯುವ ವಾಲ್ಮೀಕಿ ಜಾತ್ರಾ ಮಹೋತ್ಸವದಲ್ಲಿ ಮೀಸಲು ಹೆಚ್ಚಿಸಬೇಕು ಎಂದು ಮಾನ್ಯ ಮುಖ್ಯಮಂತ್ರಿ ಅವರಲ್ಲಿ ಮನವಿ ಮಾಡಲಾಗುವುದು ಎಂದು ತಿಳಿಸಿದರು.
ಜಾತ್ರಾ ಮಹೋತ್ಸವದ ನಿಮಿತ್ತ ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾಸ್ವಾಮೀಜಿಯವರು ನ. 29 ರಂದು ಅರಸೀಕೆರೆಗೆ ಆಗಮಿಸಲಿದ್ದಾರೆ. ನ.30 ರಂದು ಹಾಸನದ ಕನ್ನಡ ಸಾಹಿತ್ಯ ಪರಿಷತ್ತಿಗೆ ಆಗಮಿಸಲಿದ್ದಾರೆ. ಅಂದು ಜಿಲ್ಲೆಯ ಎಲ್ಲ ನಾಯಕ ಸಮಾಜದ ಬಂಧುಗಳು ಹಾಗೂ ಸಾರ್ವಜನಿಕರು ಬೆಳಗ್ಗೆ 11 ಗಂಟೆಗೆ ಆಗಮಿಸಬೇಕೆಂದು ಮನವಿ ಮಾಡಿದರು.
ವಾಲ್ಮೀಕಿ ಸಮುದಾಯದ ಹೆಸರಿನಲ್ಲಿ ಇತರ ಜನಾಂಗದವರು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುತ್ತಿದ್ದು, ಇದರ ಬಗ್ಗೆಯೂ ಸಹ ಸರ್ಕಾರದ ಗಮನಕ್ಕೆ ತರಲಾಗುವುದು ಎಂದರು.