ETV Bharat / state

ಮುಂದಿನ ಎರಡು ವರ್ಷ ನಾನೇ ಸಿಎಂ: ಹಾಸನದಲ್ಲಿ ಬಿಎಸ್‌ವೈ ಹೇಳಿಕೆ

ರಾಜ್ಯದಲ್ಲಿ ನಾಯಕತ್ವದ ಬದಲಾವಣೆ ವಿಚಾರ ಸಾಕಷ್ಟು ಚರ್ಚೆಗೆ ಕಾರಣವಾಗಿರುವ ಬೆನ್ನಲ್ಲೆ ಸಿಎಂ ಬಿ.ಎಸ್‌.ಯಡಿಯೂರಪ್ಪ ಹಾಸನದಲ್ಲಿ ಪ್ರತಿಕ್ರಿಯಿಸಿದ್ದು, ಮುಂದಿನ 2 ವರ್ಷ ನಾನೇ ಸಿಎಂ ಎಂದರು.

cm-bs-yediyurappa
ಸಿಎಂ ಬಿಎಸ್​​​ವೈ
author img

By

Published : Jun 11, 2021, 12:38 PM IST

Updated : Jun 11, 2021, 1:34 PM IST

ಹಾಸನ : ರಾಜ್ಯ ಉಸ್ತುವಾರಿ ಅರುಣ್ ಸಿಂಗ್‌ ಅವರೇ ನಾಯಕತ್ವ ವಿಚಾರದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಹಾಗಾಗಿ, ಮುಂದಿನ ಎರಡು ವರ್ಷಗಳ ಕಾಲ ನಾನೇ ಸಿಎಂ ಎಂದು ಬಿ.ಎಸ್‌.ಯಡಿಯೂರಪ್ಪ ಹಾಸನದಲ್ಲಿ ತಿಳಿಸಿದರು.

ಕೋವಿಡ್ ನಿರ್ವಹಣೆ ಮತ್ತು ತಡೆಗಟ್ಟುವ ಜೊತೆಗೆ ಅಭಿವೃದ್ಧಿ ಕಾರ್ಯಗಳ ಪರಿಶೀಲನೆ ಸಂಬಂಧ ಇಂದು ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿಗಳು, ನಗರದ ಹೊರವಲಯದ ಭುವನಹಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ಹಾಸನದಲ್ಲಿ ಸಿಎಂ ಬಿಎಸ್​ ಯಡಿಯೂರಪ್ಪ ಸುದ್ದಿಗೋಷ್ಠಿ

ಇದೇ ವೇಳೆ ಕೋವಿಡ್‌ ವಿಚಾರವಾಗಿ ಮಾತನಾಡುತ್ತಾ, ಕೋವಿಡ್‌ ಸಾವಿನ ಪ್ರಮಾಣದ ಅಂಕಿ-ಅಂಶಗಳನ್ನು ಸುಳ್ಳು ಲೆಕ್ಕ ಕೊಟ್ಟು ನಾವೇನು ಸಾಧಿಸಬೇಕು?. ನಿನ್ನೆ ಕೂಡ ಸಾವಿನ ಪ್ರಮಾಣದ ಅಂಕಿ-ಅಂಶವನ್ನು ಆಯಾ ಜಿಲ್ಲಾಧಿಕಾರಿಗಳಿಂದ ಮಾಹಿತಿ ಪಡೆದು ಅದರ ಆಧಾರದ ಮೇಲೆಯೇ ನಾವು ಅವುಗಳನ್ನು ಬಿಡುಗಡೆ ಮಾಡುತ್ತಿದ್ದೇವೆ. ಇದರಲ್ಲಿ ಯಾವುದೇ ರಾಜಕೀಯ ಮಾಡುತ್ತಿಲ್ಲ ಎಂದರು.

ಹಾಸನ ಜಿಲ್ಲೆಯ ಕೋವಿಡ್ ನಿರ್ವಹಣೆ ಸಂಬಂಧ ಪರಿಶೀಲನೆ ಮಾಡಲು ಹಾಸನ ಹಾಗೂ ಶಿವಮೊಗ್ಗ ಜಿಲ್ಲೆಗೆ ಪ್ರವಾಸ ಮಾಡಲಿದ್ದೇನೆ ಎಂದು ಅವರು ಇದೇ ವೇಳೆ ತಿಳಿಸಿದರು.

'ರಾಜ್ಯದಲ್ಲಿ ತೆರಿಗೆ ಸಂಗ್ರಹ ಕುಸಿದಿದೆ'

ಕೋವಿಡ್ ಸಂಬಂಧ ರಾಜ್ಯದಲ್ಲಿ ಈಗಾಗಲೇ ಒಂದು ವರ್ಷದಿಂದ ತೆರಿಗೆ ಸಂಗ್ರಹಣೆ ಕುಸಿದಿದೆ. ಆರ್ಥಿಕ ಪರಿಸ್ಥಿತಿ ಹದಗೆಟ್ಟು ಹೋಗಿದೆ. ಇದು ಎಲ್ಲರಿಗೂ ಗೊತ್ತಿರುವ ವಿಚಾರ. ಅದಕ್ಕೆ ಈಗಾಗಲೇ 2 ಪ್ಯಾಕೇಜ್​ಗಳನ್ನು ಘೋಷಣೆ ಮಾಡಲಾಗಿದೆ. ಇರೋವರೆಗೂ ಹೆಚ್ಚಿನ ಆದ್ಯತೆಯನ್ನು ನೀಡಲಿದ್ದೇನೆ ಎಂದರು. ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡರ ಆಶಯದಂತೆ ಹಾಸನದಲ್ಲಿ ಏರ್​​ಪೋರ್ಟ್​ ಕಾಮಗಾರಿಯನ್ನು ಶೀಘ್ರದಲ್ಲಿಯೇ ಪ್ರಾರಂಭ ಮಾಡುತ್ತೇನೆ ಎಂದಿದ್ದಾರೆ.

ಪಾಸಿಟಿವಿಟಿ ದರ ಶೇ.5ಕ್ಕಿಂತ ಕಡಿಮೆ ಬಂದರೆ ಮಾತ್ರ ಅನ್​ಲಾಕ್​​

ರಾಜ್ಯದಲ್ಲಿನ 11 ಜಿಲ್ಲೆಗಳ ಪೈಕಿ ಹಾಸನ ಜಿಲ್ಲೆ ಅತೀ ಹೆಚ್ಚು ಸೋಂಕಿತರನ್ನು ಹೊಂದಿದೆ. ಶೇ.5ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಬಂದಾಗ ಮಾತ್ರ ಹಾಸನವನ್ನು ಅನ್​ಲಾಕ್​ ಮಾಡಬಹುದು ಎಂದರು. ರಾಜ್ಯದಲ್ಲಿ ಸಾವಿನ ಪ್ರಮಾಣ ಹೆಚ್ಚಾಗಲು ಡಬಲ್ ಇಂಜಿನ್ ಸರ್ಕಾರವೇ ಕಾರಣ ಎಂಬ ಮಾಜಿ ಸಚಿವ ಹೆಚ್‌ ಡಿ ರೇವಣ್ಣನವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿದ ಬಿಎಸ್​​ವೈ, ಒಬ್ಬ ಜವಾಬ್ದಾರಿಯುತ ಶಾಸಕರಾಗಿ ತಮ್ಮ ಜಿಲ್ಲೆಯಲ್ಲಿ ಸೋಂಕಿತರನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಕೆಲಸ ಮಾಡಬೇಕು, ಅದನ್ನು ಬಿಟ್ಟು ಈ ರೀತಿ ಹೇಳಿಕೆ ಕೊಡುವುದು ಅವರಿಗೆ ಶೋಭೆ ತರುವುದಿಲ್ಲ ಎಂದರು.

ತಪ್ಪು ಮಾಡಿದವರು ಶಿಕ್ಷೆ ಅನುಭವಿಸಬೇಕು

ರಮೇಶ್​ ಜಾರಕಿಹೊಳಿ ವಿಚಾರದಲ್ಲಿ ಕಾನೂನು ಸಮರ ನಡೆಯುತ್ತಿದೆ. ತಪ್ಪು ಮಾಡಿದವರು ಶಿಕ್ಷೆ ಅನುಭವಿಸಲೇಬೇಕು. ಪ್ರಕರಣ ನ್ಯಾಯಾಲಯದಲ್ಲಿದ್ದು, ತಪ್ಪಿತಸ್ಥರಿಗೆ ಶಿಕ್ಷೆ ಆಗುತ್ತದೆ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದರು.

Last Updated : Jun 11, 2021, 1:34 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.