ETV Bharat / state

ರಾಹುಲ್ ಗಾಂಧಿ ಕಾಲಿಟ್ಟ ಕಡೆಯಲ್ಲೆಲ್ಲ ಕಾಂಗ್ರೆಸ್ ಸೋಲುತ್ತಿದೆ: ಕಟೀಲ್ ವ್ಯಂಗ್ಯ

ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಕಾಲಿಟ್ಟ ಕಡೆಯಲ್ಲೆಲ್ಲಾ ಕಾಂಗ್ರೆಸ್ ಪಕ್ಷ ಸೋಲು ಅನುಭವಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟಿಲ್ ವ್ಯಂಗ್ಯವಾಡಿದ್ದಾರೆ. ಇದೇ ವೇಳೆ, ಬಿಜೆಪಿ ಸಂಕಲ್ಪ ಯಾತ್ರೆಗೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ಸಿಗುತ್ತಿದೆ ಎಂದು ಮಾಧ್ಯಮಕ್ಕೆ ತಿಳಿಸಿದರು.

author img

By

Published : Nov 4, 2022, 11:17 AM IST

congress-is-losing-wherever-rahul-gandhi-steps-katil-says-ironically
ನಳೀನ್ ಕುಮಾರ್ ಕಟಿಲ್

​ಹಾಸನ: ರಾಜ್ಯದ 18 ಕ್ಷೇತ್ರಗಳಲ್ಲಿ ಸಂಕಲ್ಪ ಯಾತ್ರೆ ಮುಗಿಸಿ ಹಾಸನಕ್ಕೆ ಬಂದಿದ್ದೇವೆ. ಇದಕ್ಕೆ ಎಲ್ಲೆಡೆ ಅಭೂತಪೂರ್ವ ಬೆಂಬಲ ಸಿಗುತ್ತಿದೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್ ಕಟೀಲ್ ಹೇಳಿದರು.

​ಕಾಂಗ್ರೆಸ್ ರಾಜ್ಯಾಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಹಳೇ ಫ್ರೆಂಡ್ಸ್‌ಗಳು ಮತ್ತೆ ಕಾಂಗ್ರೆಸ್ ಪಕ್ಷ ಸೇರ್ತಾರಾ ಎಂಬ ವಿಚಾರವಾಗಿ ಮಾತನಾಡಿ, "ಅವರ ಹಳೇಯ ಫ್ರೆಂಡ್ಸ್ ಯಾರು ಬಿಜೆಪಿಗೆ ಬಂದಿದ್ದಾರೆ?, ಯಾರೂ ವಾಪಸ್ ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಇದಕ್ಕೆ ಸ್ಪಷ್ಟವಾದಂತಹ ಉತ್ತರವನ್ನು ಈಗಾಗಲೇ ಎಸ್.ಟಿ. ಸೋಮಶೇಖರ್ ಕೊಟ್ಟಿದ್ದಾರೆ" ಎಂದರು.

​ಭಾರತ್ ಜೋಡೋ ಯಾತ್ರೆಯಿಂದ 130-150 ಸೀಟ್ ಗೆಲ್ಲುತ್ತೇವೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಅವರೇ ಸಮರ್ಥಿಸಿಕೊಳ್ಳಬೇಕು. ಮೊನ್ನೆ ನಡೆದಿರುವ ಚುನಾವಣೆಗಳಲ್ಲಿ ಎಲ್ಲ ಫಲಿತಾಂಶಗಳು ಬಿಜೆಪಿ ಪರವಾಗಿಯೇ ಇದೆ. ರಾಹುಲ್ ಗಾಂಧಿ ಕಾಲಿಟ್ಟ ಕಡೆಯಲ್ಲೆಲ್ಲ ಕಾಂಗ್ರೆಸ್ ಸೋಲುತ್ತಿದೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಸಿದ್ದರಾಮಯ್ಯ ವಿರುದ್ಧ ಲೋಕಾಯುಕ್ತಕ್ಕೆ ದೂರು: 'ತ‌ನಿಖೆಯಿಂದ ಸತ್ಯ ಹೊರಬರಲಿದೆ'-ಬಿಎಸ್‌ವೈ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.