ETV Bharat / state

ಹಾಸನದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಹಾಸನದ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

congress-protest-against-caa-in-hassan
ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ
author img

By

Published : Dec 30, 2019, 10:09 AM IST

ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನ ಎರಡೂ ಸದನಗಳಲ್ಲೂ ಪಾಸ್​ ಆಗಿ, ಬಳಿಕ ರಾಷ್ಟ್ರಪತಿಗಳಿಂದ ಅಂಗೀಕಾರಗೊಂಡಿದೆ. ಆದರೆ ಇದು ಭಾರತೀಯ ಗಣತಂತ್ರದ ಪ್ರಜಾಸತ್ತಾತ್ಮಕ ಬುನಾದಿಯನ್ನು ನಾಶಪಡಿಸಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಯು.ಟಿ. ಖಾದರ್‌ ಅವರ ಮೇಲೆ ಹಾಕಲಾಗಿರುವ ಪ್ರಕರಣವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಕಾಂಗ್ರೆಸ್ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಸಿಎಎ ವಿರೋಧಿಸಿ ಕಾಂಗ್ರೆಸ್ ಪ್ರತಿಭಟನೆ

ಪೌರತ್ವ ತಿದ್ದುಪಡಿ ಮಸೂದೆ ಸಂಸತ್ತಿನ ಎರಡೂ ಸದನಗಳಲ್ಲೂ ಪಾಸ್​ ಆಗಿ, ಬಳಿಕ ರಾಷ್ಟ್ರಪತಿಗಳಿಂದ ಅಂಗೀಕಾರಗೊಂಡಿದೆ. ಆದರೆ ಇದು ಭಾರತೀಯ ಗಣತಂತ್ರದ ಪ್ರಜಾಸತ್ತಾತ್ಮಕ ಬುನಾದಿಯನ್ನು ನಾಶಪಡಿಸಿದಂತೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮಾಜಿ ಸಚಿವ ಯು.ಟಿ. ಖಾದರ್‌ ಅವರ ಮೇಲೆ ಹಾಕಲಾಗಿರುವ ಪ್ರಕರಣವನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು.

Intro:ಹಾಸನ: ಸಂವಿಧಾನ ತಿದ್ದುಪಡಿ ಕಾಯಿದೆಯನ್ನು ವಿರೋಧಿಸಿ ಕಾಂಗ್ರೆಸ್ ನೇತೃತ್ವದಲ್ಲಿ ಜಿಲ್ಲಾಧಿಕಾರಿ ಕಛೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿ ತಮ್ಮ ಆಕ್ರೋಶವ್ಯಕ್ತಪಡಿಸಿದರು.
ಮಂಗಳೂರಿನಲ್ಲಿ ನಡೆದ ಗೋಲಿಬಾರ್‌ನಲ್ಲಿ ಇಬ್ಬರು ಸಾವನ್ನಪ್ಪಿದ್ದು, ಈ ಬಗ್ಗೆ ಕೂಡಲೇ ತನಿಖೆಗೆ ಒಳಪಡಿಸಬೇಕು. ಪೌರತ್ವ ಕಾಯ್ದೆ ತಿದ್ದುಪಡಿಯನ್ನು ಸಂಸತ್ತಿನ ಎರಡೂ ಸದನಗಳು ಈ ಸಿಎಬಿಯನ್ನು ಪಾಸು ಮಾಡಿವೆ. ಆದರೇ ಈ ಮಸೂದೆ ಭಾರತೀಯ ಸಂವಿಧಾನದ ಸಂಪೂರ್ಣ ಉಲ್ಲಂಘನೆಯಾಗಿದೆ.
ಭಾರತೀಯ ಗಣತಂತ್ರದ ಪ್ರಜಾಸತ್ತಾತ್ಮಕ ಬುನಾದಿಯನ್ನು ನಾಶಪಡಿಸುವುದೇ ಅದರ ಉದ್ದೇಶವಾಗಿದೆ. ಎಡಪಕ್ಷಗಳು ಮತ್ತು ಜಾತ್ಯಾತೀತ ಪ್ರಜಾಸತ್ತಾತ್ಮಕ ಸಂಘಟನೆಗಳು ಇದನ್ನು ಬಲವಾಗಿ ವಿರೋಧಿಸುತ್ತವೆ. ಇದು ಪೌರತ್ವವನ್ನು ಒಬ್ಬ ವ್ಯಕ್ತಿಯ ಧಾರ್ಮಿಕ ನೆಲೆಯೊಂದಿಗೆ ಜೋಡಿಸುತ್ತದೆ, ಇದು ದೇಶದ ಜಾತ್ಯತೀತತೆ ಪ್ರಜಾಪ್ರಭುತ್ವಕ್ಕೆ ತದ್ವಿರುದ್ಧವಾದೆ ಎಂದು ಆಕ್ರೋಶವ್ಯಕ್ತಪಡಿಸಿದರು.
ದೇಶದಲ್ಲಿ ಕೋಮು ವಿಭಜನೆ ಮತ್ತು ಸಾಮಾಜಿಕ ಧ್ರುವೀಕರಣವನ್ನು ಇನ್ನಷ್ಟು ತೀಕ್ಷಗೊಳಿಸುವುದು ಈ ಮಸೂದೆಯ ಉದ್ದೇಶವಾಗಿದೆ ಎಂದರು. ಮುಗ್ಧ ಮನಸ್ಸಿನ ಮಾಜಿ ಸಚಿವ ಯು.ಟಿ. ಖಾದರ್‌ರವರ ಮೇಲೆ ಹಾಕಲಾಗಿರುವ ಪ್ರಕರಣವನ್ನು ಕೂಡಲೇ ವಾಪಸ್ ಪಡೆಯಬೇಕು ಹಾಗೂ ಮಂಗಳೂರಿನಲ್ಲಿ ಪೊಲೀಸರು ನಡೆಸಿರುವ ಮೃಗೀಯ ವರ್ತನೆಯು ನಾಗರಿಕರನ್ನು ಆತಂಕಕ್ಕೆ ಒಳಗಾಗಿದೆ. ಪೊಲೀಸರ ಈ ರೀತಿಯ ಬೆದರಿಕೆಯ ಕ್ರಮಗಳು ಜನರ ಪ್ರತಿಭಟನೆಯ ಕಿಚ್ಚನ್ನು ತಣಿಸದು ಹಾಗು ಗೋಲಿ ಬಾರ್ ಹತ್ಯೆಯೊಂದಿಗೆ ಈ ಹೋರಾಟವು ಕೊನೆಗೊಳ್ಳದು.
ಬದುಕುವ ತಮ್ಮ ಮೂಲಭೂತ ಹಕ್ಕಿಗಾಗಿ ನಾಗರೀಕರು ಬೀದಿಗಿಳಿದು ಹೋರಾಟಕ್ಕಿಳಿದಿದ್ದು ಇದು ಜನಾಂದೋಲನವಾಗಿ ನ್ಯಾಯ ಪಡೆಯುವವರೆಗೂ ಮುಂದುವರಿಯಲಿದೆ ಎಂದು ಇಲ್ಲವಾದರೇ ಮುಂದೆ ಇಂತಹ ಹೋರಾಟಗಳು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಬೈಟ್ : ಜಾವಗಲ್ ಮಂಜುನಾಥ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ.

- ಅರಕೆರೆ ಮೋಹನಕುಮಾರ, ಈಟಿವಿ ಭಾರತ, ಹಾಸನ.
Body:0Conclusion:0
ETV Bharat Logo

Copyright © 2024 Ushodaya Enterprises Pvt. Ltd., All Rights Reserved.