ಹಾಸನ: ನನ್ನ ನಾಯಕನಿಗೆ ಕುರ್ಚಿ ಸಿಗಲಿಲ್ಲ ಎಂದು ಸ್ವಪಕ್ಷಿಯರೇ ಕುರ್ಚಿಗಾಗಿ ಗಲಾಟೆ ಮಾಡಿಕೊಂಡ ಪ್ರಸಂಗ ನಡೆದಿದೆ. ಹಾಸನ ಹೊರವಲಯದ ಕಲ್ಯಾಣ ಮಂಟಪವೊಂದರಲ್ಲಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಲು ಅಭ್ಯರ್ಥಿ ಯಾರಾಗಬೇಕೆಂದು ನಿರ್ಧರಿಸಲು ಕಾಂಗ್ರೆಸ್ ಕಾರ್ಯಕರ್ತರ ಸಭೆ ಕರೆಯಲಾಗಿತ್ತು. ಈ ವೇಳೆ, ವೇದಿಕೆಯಲ್ಲಿ ಕುಳಿತುಕೊಳ್ಳಲು ಕುರ್ಚಿ ಸಿಗಲಿಲ್ಲ ಎಂಬ ಕಾರಣಕ್ಕೆ ಗದ್ದಲ ಉಂಟಾಗಿದೆ. ಆಸನ ಸಿಕ್ಕಿಲ್ಲ ಎಂದು ಕಾಂಗ್ರೆಸ್ ಮುಖಂಡ ಹೆಚ್.ಕೆ.ಮಹೇಶ್ ಬೆಂಬಲಿಗರು ಗಲಾಟೆ ಮಾಡಿದ್ದಾರೆ. ಕಾರ್ಯಕರ್ತರ ವರ್ತನೆಗೆ ಸಚಿವ ಎನ್.ಚಲುವರಾಯಸ್ವಾಮಿ ಬೇಸರ ವ್ಯಕ್ತಪಡಿಸಿದರು.
ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು ಕಾಂಗ್ರೆಸ್ ಮೆಗಾ ಪ್ಲ್ಯಾನ್ ಮಾಡುತ್ತಿದೆ. ಹಾಗಾಗಿ ನಿನ್ನೆ ಹಾಸನ ಹೊರವಲಯದ ಕಲ್ಯಾಣ ಮಂಟಪದಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಸಭೆ ನಡೆದಿದ್ದು, ಗದ್ದಲ ಉಂಟಾಗಿದೆ. ಆಸನ ಸಿಕ್ಕಿಲ್ಲ ಎಂದು ಕಾಂಗ್ರೆಸ್ ಮುಖಂಡ ಹೆಚ್.ಕೆ.ಮಹೇಶ್ ಬೆಂಬಲಿಗರು ಖ್ಯಾತೆ ತೆಗೆದಿದ್ದಾರೆ. ಕಾರ್ಯಕರ್ತರ ವರ್ತನೆಗೆ ಸಚಿವ ಎನ್.ಚಲುವರಾಯಸ್ವಾಮಿ 40 ವರ್ಷದ ನನ್ನ ರಾಜಕೀಯದಲ್ಲಿ ಇಂತಹ ಘಟನೆ ನೋಡಿಲ್ಲ ಎಂದು ಬೇಸರ ವ್ಯಕ್ತ ಪಡಿಸಿದ್ದಾರೆ.
ನೀವು ಈ ರೀತಿ ಗಲಾಟೆ ಮಾಡಿದರೆ ನಾನು ಹೊರಟು ಹೋಗುತ್ತೇನೆ. ನನ್ನ ರಾಜಕೀಯದಲ್ಲಿ ಈ ರೀತಿ ಸಭೆ ನೋಡಿಲ್ಲ. ಸಣ್ಣ ಪುಟ್ಟ ವ್ಯತ್ಯಾಸಗಳಿದ್ದರೆ ಸರಿ ಮಾಡಿಕೊಂಡು ಹೋಗಬೇಕು. ಅದನ್ನು ಬಿಟ್ಟು ಈ ರೀತಿ ನಡೆದುಕೊಳ್ಳಬಾರದು ಎಂದು ಸಚಿವ ಎನ್. ಚಲುವರಾಯಸ್ವಾಮಿ ಕಾರ್ಯಕರ್ತರಿಗೆ ಮನವಿ ಮಾಡಿದರು. ಹಾಸನ ಲೋಕಸಭಾ ಕ್ಷೇತ್ರ ಗೆಲ್ಲಲು 5 ತಿಂಗಳ ಮುಂಚೆಯೇ ಕಾಂಗ್ರೆಸ್ ಚುನಾವಣಾ ತಯಾರಿ ನಡೆಸಿದ್ದು, ಸಚಿವರಾದ ಕೆ.ಎನ್.ರಾಜಣ್ಣ, ಚಲುವರಾಯಸ್ವಾಮಿ ನೇತೃತ್ವದಲ್ಲಿ ಸಭೆ ಮಾಡಲಾಗಿದೆ. ಕಾರ್ಯಕರ್ತರು, ಟಿಕೆಟ್ ಆಕಾಂಕ್ಷಿಗಳ ಜತೆ ಸಭೆ ನಡೆಸಿದರು. ಸಭೆಯಲ್ಲಿ ಕಾರ್ಯಕರ್ತರು, ಪ್ರಮುಖರಿಂದ ಮಾಹಿತಿ ಪಡೆಯಲಾಗಿದೆ.
ಇದನ್ನೂ ಓದಿ: ಹೆಚ್.ಡಿ.ರೇವಣ್ಣ ಆಪ್ತನ ಮೇಲೆ ದಾಳಿ ಪ್ರಕರಣ: ಪೊಲೀಸ್ ಅಧಿಕಾರಿ ಸೇರಿ ಆರು ಮಂದಿ ಬಂಧನ