ETV Bharat / state

ಹಾಸನದ ಎಪಿಎಂಸಿಯಲ್ಲಿ ಗುಂಪಾಗಿ ಇದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಹಾಸನದ ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಬಂದು ತರಕಾರಿ ವ್ಯಾಪಾರದಲ್ಲಿ ತೊಡಗಿದ್ದಾಗ ಎಸ್ಪಿ ಶ್ರೀನಿವಾಸ್ ಗೌಡ ಲಾಠಿ ರುಚಿ ತೋರಿಸುವ ಮೂಲಕ ಜನಸಂದಣಿ ನಿಯಂತ್ರಿಸಿದರು.

author img

By

Published : Apr 1, 2020, 11:13 PM IST

cops who gave batons to the crowd in the APMC market
ಎಪಿಎಂಸಿ ಮಾರುಕಟ್ಟೆಯಲ್ಲಿ ಗುಂಪಾಗಿ ಇದ್ದವರಿಗೆ ಲಾಠಿ ರುಚಿ ತೋರಿಸಿದ ಪೊಲೀಸರು

ಹಾಸನ: ದೇಶದಲ್ಲಿ ಕಾಡುತ್ತಿರುವ ಕೊರೊನಾ ವೈರಸ್ ನಿಯಂತ್ರಿಸಲು ಸರ್ಕಾರ ಹಲವು ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಆದರೂ ಅದನ್ನು ಲೆಕ್ಕಿಸದೇ ಇದ್ದವರಿಗೆ ಎಸ್ಪಿ ಶ್ರೀನಿವಾಸ್ ಗೌಡ ಲಾಠಿ ರುಚಿ ತೋರಿಸುವ ಮೂಲಕ ಎಪಿಎಂಸಿ ಮಾರುಕಟ್ಟೆಯಲ್ಲಿ ಇದ್ದ ಜನಜಂಗುಳಿಯನ್ನ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದ್ದಾರೆ.​

​ಎರಡು ವಾರಗಳಿಂದ ಹಾಸನ ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ, ಪೊಲೀಸ್ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಹಗಲು-ರಾತ್ರಿ ಶ್ರಮಿಸುತ್ತಿದ್ದರೂ ಜನರು ಕಾನೂನು ಪಾಲಿಸದೇ ತಮಗೆ ಇಷ್ಟ ಬಂದ ಹಾಗೆ ಓಡಾಡುತ್ತಿದ್ದಾರೆ. ಇನ್ನು ಎಪಿಎಂಸಿ ಮಾರುಕಟ್ಟೆಯಲ್ಲಿ ಜನರು ಗುಂಪು ಗುಂಪಾಗಿ ಬಂದು ತರಕಾರಿ ವ್ಯಾಪಾರದಲ್ಲಿ ತೊಡಗಿದ್ರು.

ಈ ಬಗ್ಗೆ ದೂರು ಬಂದ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಪೊಲೀಸ್ ಸಿಬ್ಬಂದಿಯೊಂದಿಗೆ ಎಪಿಎಂಸಿ ಮಾರುಕಟ್ಟೆಗೆ ಆಗಮಿಸಿ ಲಾಠಿ ರುಚಿ ತೋರಿಸಿ ಎಚ್ಚರಿಸಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.