ಹಾಸನ: ಜಿಲ್ಲೆಯಲ್ಲಿ ಇಂದು ಅತಿ ಹೆಚ್ಚು ಕೊರೊನಾ ಪ್ರಕರಣ ಪತ್ತೆಯಾಗಿವೆ. 255 ಮಂದಿಗೆ ಸೋಂಕು ತಗುಲಿದ್ದು, 6 ಜನರು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ಸತೀಶ್ ತಿಳಿಸಿದ್ದಾರೆ.
ಆಲೂರು-2, ಬೇಲೂರು-21, ಹಾಸನ-112, ಅರಸೀಕೆರೆ-24, ಚನ್ನರಾಯಪಟ್ಟಣ-35, ಅರಕಲಗೂಡು-26, ಹೊಳೆನರಸೀಪುರ-33, ಸಕಲೇಶಪುರ-1, ಇತರೆ- 1 ಪ್ರಕರಣ ಪತ್ತೆಯಾಗಿವೆ. ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3986 ಕ್ಕೆ ಏರಿಕೆಯಾಗಿದೆ. ಇಂದು 162 ಜನರ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಗುಣಮುಖರಾದವರ ಸಂಖ್ಯೆ 1688 ಕ್ಕೆ ಏರಿಕೆಯಾಗಿದೆ. 2182 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 116 ಮಂದಿ ಕೊರೊನಾ ಮಹಾಮಾರಿಗೆ ಬಲಿಯಾಗಿದ್ದಾರೆ.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್ ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು ಎಂದಿದ್ದಾರೆ.