ETV Bharat / state

ಹಾಸನದಲ್ಲಿಂದು 195 ಕೊರೊನಾ ಪ್ರಕರಣ ದೃಢ: 6 ಮಂದಿ ಸೋಂಕಿಗೆ ಬಲಿ

ಹಾಸನ ಜಿಲ್ಲೆಯಲ್ಲಿ ಕೊರೊನಾ ಉಲ್ಭಣಿಸುತ್ತಿದ್ದು, ಇಂದು 195 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದರೆ, 6 ಮಂದಿ ಸಅವನ್ನಪ್ಪಿದ್ದಾರೆ. ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 6,172 ಕ್ಕೆ ಏರಿಕೆಯಾಗಿದೆ.

author img

By

Published : Aug 24, 2020, 7:19 PM IST

ಹಾಸನ: ಜಿಲ್ಲೆಯಲ್ಲಿಂದು 195 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿದ್ದು, 6 ಜನರು ಮೃತಪಟ್ಟಿದ್ದಾರೆ ಎಂದು ಸಂತಾನೋತ್ಪತ್ತಿ ಮತ್ತು ಮಕ್ಕಳ ಅಧಿಕಾರಿ ಡಾ. ಕಾಂತರಾಜ್ ತಿಳಿಸಿದ್ದಾರೆ.

ನದಲ್ಲಿ ಇಂದು 195 ಕೊರೊನಾ ಪ್ರಕರಣ ದೃಢ
ಮಾಧ್ಯಮದವರಿಗೆ ಮಾಹಿತಿ ನೀಡಿರುವ ಅವರು, ಸೋಮವಾರ ದಾಖಲಾಗಿರುವ ಕೊರೊನಾ ಪ್ರಕರಣಗಳಲ್ಲಿ ಆಲೂರು-12, ಅರಕಲಗೂಡು-22, ಅರಸೀಕೆರೆ-29, ಬೇಲೂರು-16, ಚನ್ನರಾಯಪಟ್ಟಣ-18, ಹಾಸನ-81, ಹೊಳೆನರಸೀಪುರ-11, ಸಕಲೇಶಪುರ-12, ಇತರೆ- 1 ಸೇರಿ ಒಟ್ಟು 195 ಪಾಸಿಟಿವ್ ಪ್ರಕರಣ ದಾಖಲಾಗಿದ್ದು, ಈವರೆಗೆ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 6,172 ಕ್ಕೆ ಏರಿಕೆಯಾಗಿದೆ.
ಇಂದು 151 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಈವರೆಗೆ 4,097 ಮಂದಿ ಗುಣಮುಖರಾಗಿ ಡಿಸ್ಚಾರ್ಜ್​ ಆಗಿದ್ದಾರೆ. 1910 ಸೋಂಕಿತರು ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಹಾಗೂ 165 ಮಂದಿ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು.
ಕೊರೊನಾ ಉಲ್ಬಣವಾಗುತ್ತಿರುವ ಹಿನ್ನೆಲೆ ಯಾರಿಗಾದರೂ ಉಸಿರಾಟದಲ್ಲಿ ತೊಂದರೆ, ಜ್ವರ, ಶೀತ, ನೆಗಡಿ, ಕೆಮ್ಮು ಏನಾದರೂ ಇದ್ದರೇ ಹಿಮ್ಸ್, ಸಾರ್ವಜನಿಕ ಆಸ್ಪತ್ರೆ ಸೇರಿದಂತೆ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ತಪಾಸಣೆಗೆ ಒಳಪಡಬೇಕು. ಸಾರ್ವಜನಿಕರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳುವ ಮೂಲಕ ಮತ್ತು ಉತ್ತಮ ದರ್ಜೆಯ ಮಾಸ್ಕ್ ಧರಿಸಿ, ಸ್ಯಾನಿಟೈಸರ್ ಬಳಕೆ ಮಾಡಿ, ಸಭೆ ಸಮಾರಂಭವನ್ನು ಆದಷ್ಟು ಕಡಿಮೆ ಮಾಡುವ ಮೂಲಕ ಕೊರೊನಾ ಸೋಂಕು ತಡೆಗಟ್ಟುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಡಾ. ಕಾಂತರಾಜ್ ಮನವಿ ಮಾಡಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.