ETV Bharat / state

ಅರಸೀಕೆರೆ ಶಾಸಕ ಶಿವಲಿಂಗೇಗೌಡಗೆ ಕೊರೊನಾ ಪಾಸಿಟಿವ್​ - Arasikere MLA Shivalinga Gowda

ಅರಸೀಕೆರೆ ಶಾಸಕ ಶಿವಲಿಂಗೇಗೌಡರಿಗೆ ಕೊರೊನಾ ತಗುಲಿದ್ದು, ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

MLA Shivalinga Gowda
ಶಾಸಕ ಶಿವಲಿಂಗೇಗೌಡ
author img

By

Published : Aug 25, 2020, 5:41 PM IST

ಹಾಸನ: ಇಂದು ಕೂಡ ಜಿಲ್ಲೆಯಲ್ಲಿ 206 ಕೊರೊನಾ ಪ್ರಕರಣಗಳು ಪತ್ತೆಯಾಗಿವೆ. ಇದೀಗ ಅರಸೀಕೆರೆ ಶಾಸಕ ಶಿವಲಿಂಗೇಗೌಡ ಅವರಿಗೆ ಕೊರೊನಾ ದೃಢಪಟ್ಟಿದೆ.

ಈಗಾಗಲೇ ಶಾಸಕ ಶಿವಲಿಂಗೇಗೌಡರ ಪತ್ನಿ ಕೊರೊನಾದಿಂದ ಗುಣಮುಖರಾಗಿದ್ದಾರೆ. ಇದರ ಬೆನ್ನಲ್ಲೇ ಶಿವಲಿಂಗೇಗೌಡರಿಗೆ ಕೊರೊನಾ ತಗುಲಿದೆ. ಸದ್ಯ ಶಾಸಕರು ಬೆಂಗಳೂರಿನ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಶಾಸಕ ಶಿವಲಿಂಗೇಗೌಡರು ಸ್ವತಃ ತಾವೇ ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ ಜನತೆಗೆ ಧೈರ್ಯ ತುಂಬಿದ್ದಾರೆ.

ಶಾಸಕ ಶಿವಲಿಂಗೇಗೌಡರು ಸ್ವತಃ ತಾವೇ ಆಸ್ಪತ್ರೆಯಿಂದಲೇ ವಿಡಿಯೋ ಮಾಡಿ, ಕೊರೊನಾ ಪಾಸಿಟಿವ್ ಬಂದಿರುವ ಬಗ್ಗೆ ದೃಢಪಡಿಸಿದ್ದಾರೆ. ಯಾರೂ ಹೆದರುವ ಅವಶ್ಯಕತೆ ಇಲ್ಲ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲೆ ಇರುವ ತನಕ ನನಗೆ ಏನೂ ಆಗುವುದಿಲ್ಲ. ನನ್ನ ಜೊತೆ ಸಂಪರ್ಕದಲ್ಲಿದ್ದವರು ದಯಮಾಡಿ ಪರೀಕ್ಷೆಗೊಳಪಟ್ಟು ರೋಗದ ಲಕ್ಷಣಗಳ ಬಗ್ಗೆ ಖಚಿತಪಡಿಸಿಕೊಳ್ಳಿ ಎಂದು ಹೇಳಿದ್ದಾರೆ.

ಕ್ಷೇತ್ರದ ಜನರು ಕೂಡ ಆತಂಕಕ್ಕೆ ಒಳಗಾಗುವ ಅವಶ್ಯಕತೆ ಇಲ್ಲ. ನಾನು ಎಂಟು ದಿನದ ನಂತರ ಗುಣಮುಖವಾಗಿ ವಾಪಸ್ ಕ್ಷೇತ್ರಕ್ಕೆ ಬರುತ್ತೇನೆ ಎಂದು ಹೇಳುವ ಮೂಲಕ ಜನತೆಗೆ ಧೈರ್ಯ ತುಂಬಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.